ಗುರುವಾರ, ಜುಲೈ 25, 2024
ಜು.27 ರಂದು ವಿಶ್ರೀಕೃ ವಿಶ್ವವಿದ್ಯಾಲಯ 15ನೇ ವರ್ಷದ ಸಂಸ್ಥಾಪನಾ ದಿನ
ಬಳ್ಳಾರಿ,ಜು.25(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ೧೫ನೇ ಸಂಸ್ಥಾಪನಾ ದಿನ-2024 ಕಾರ್ಯಕ್ರಮವನ್ನು ಜು.27 ರಂದು ಬೆಳಿಗ್ಗೆ 09 ಗಂಟೆಗೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರ ಆವರಣದಲ್ಲಿ ಆಯೋಜಿಸಲಾಗಿದೆ.
ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ತಿಪ್ಪೇರುದ್ರಪ್ಪ ಜೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗದಗ ಮತ್ತು ವಿಜಯನಗರ ಜಿಲ್ಲೆಯ ರಾಮಕೃಷ್ಣ ವಿವೇಕಾನಂದ ಆಶ್ರಮ ಅಧ್ಯಕ್ಷರಾದ ಸ್ವಾಮಿ ನಿರ್ಭಯಾನಂದ ಸರಸ್ವತಿ ಅವರು ದಿವ್ಯಸಾನಿಧ್ಯ ವಹಿಸಿ, ಆರ್ಶೀವಚನ ನೀಡುವರು.
ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ.ರವಿ, ವಿಜಯಪುರ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ತುಳಸಿಮಾಲ ಬಿ.ಕೆ., ಹಾವೇರಿಯ ಕರ್ನಾಟಕ ಜನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಭಾಸ್ಕರ್ ಟಿ.ಎಮ್., ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಹಿಂದುರಾವ್ ಸೂರ್ಯವಂಶಿ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ.ಮಂಜಪ್ಪ ಡಿ.ಹೊಸಮನೆ, ಪ್ರೊ.ಎಮ್.ಎಸ್.ಸುಭಾಷ್, ಪ್ರೊ.ಸಿದ್ದು ಪಿ.ಆಲಗೂರು ಸೇರಿದಂತೆ ವಿಶ್ವವಿದ್ಯಾಲಯದ ಮಾಜಿ ಕುಲಸಚಿವರುಗಳು, ಕುಲಸಚಿವರು(ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು ಹಾಗೂ ವಿವಿಯ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಶ್ವವಿದ್ಯಾಲಯದ ಕುಲಸಚಿವ ರುದ್ರೇಶ್.ಎಸ್.ಎನ್., ಕುಲಸಚಿವ(ಮೌಲ್ಯಮಾಪನ) ಪ್ರೊ.ರಮೇಶ್ ಓ.ಓಲೇಕಾರ, ವಿತ್ತಾಧಿಕಾರಿ ನಾಗರಾಜ ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ನಗರ ಕೃಷ್ಣಉಡುಪ, ಗಾಯಕರಾಗಿ ಸುನಿತಾ, ಶ್ರೀನಿವಾಸ ಹಾಗೂ ವಿನಯ್ ನಾಡಿಗ್ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ನಡೆಸುವರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ