ಸೋಮವಾರ, ಜುಲೈ 1, 2024
ಬಾಲಕ ನಾಪತ್ತೆ: ಪತ್ತೆಗೆ ಮನವಿ
ಬಳ್ಳಾರಿ,ಜು.01(ಕರ್ನಾಟಕ ವಾರ್ತೆ):
ಕೌಲ್‍ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕಂಟೋನ್‍ಮೆಂಟ್‍ನ ಸರ್ಕಾರಿ ಬುದ್ದಿಮಾಂದ್ಯ ಬಾಲಕರ ಬಾಲಮಂದಿರದ ಆಕಾಶ್ ಎನ್ನುವ 13 ವರ್ಷದ ಅಪ್ರಾಪ್ತ ಬಾಲಕ ಜೂ.27 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು: ಎತ್ತರ 5 ಅಡಿ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕಾಣೆಯಾದ ಸಂದರ್ಭದಲ್ಲಿ ನೀಲಿ ಬೂದಿ ಬಣ್ಣದ ಅಂಗಿ, ನೀಲಿ ಬಣ್ಣದ ಬರ್ಮೋಡ ಧರಿಸಿದ್ದು, ಹಿಂದಿ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಬಾಲಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್‍ಬಜಾರ್ ಪೊಲೀಸ್ ಠಾಣೆಯ ದೂ.08392-240731, 24415, ಪಿಐ ಮೊ.9480803047, ಪಿಎಸ್‍ಐ ದೂ.94808203085 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ