ಮಂಗಳವಾರ, ಜುಲೈ 2, 2024
ಸರ್ಕಾರಿ ಐಟಿಐ: ಉಳಿದ ಸ್ಥಾನಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಜು.02(ಕರ್ನಾಟಕ ವಾರ್ತೆ):
ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಪ್ರಸ್ತಕ ಸಾಲಿಗೆ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಎರಡನೇ ಸುತ್ತಿನ ಪ್ರವೇಶದ ನಂತರ ಉಳಿದ ಸ್ಥಾನಗಳ ಪ್ರವೇಶಾತಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜುಲೈ 04 ರಿಂದ ಆಗಸ್ಟ್ 31 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ದಿನದಂದೇ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಯಲಿದ್ದು, ಮಾರನೇ ದಿನದಂದು ಮೆರಿಟ್ ಆಧಾರದಲ್ಲಿ ಮಾತ್ರ ಉಳಿದ ಸ್ಥಾನಗಳಿಗೆ ಪ್ರವೇಶ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಂಟೋನ್‍ಮೆಂಟ್ ಪ್ರದೇಶದ ರೇಡಿಯೋ ಪಾರ್ಕ್‍ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ