ಶನಿವಾರ, ಜುಲೈ 20, 2024
ಮೀನುಗಾರಿಕೆ ಸೌಲಭ್ಯ ಹೊಂದಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ
ಬಳ್ಳಾರಿ,ಜು.20(ಕರ್ನಾಟಕ ವಾರ್ತೆ):
ಮೀನುಗಾರರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಮೀನುಗಾರಿಕೆ ಇಲಾಖೆಯಿಂದ ಸಿಗಬಹುದಾದ ಸೌಲಭ್ಯಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.
ಶನಿವಾರ, ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ್ ಕಾರ್ಯಕ್ರಮದಡಿ ನಿರ್ಮಾಣ ಮಾಡಲಾದ ಅಮೃತ ಸರೋವರ ಕೊಳಗಳಲ್ಲಿ ಮೀನು ಮರಿಗಳನ್ನು ದಾಸ್ತಾನು ಮಾಡಿ ಮೀನು ಉತ್ಪಾದನೆಯನ್ನು ಹೆಚ್ಚಿಸುವಂತೆ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಿ, ಮೀನು ಕೃಷಿಕರು ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮೀನುಗಾರಿಕೆ ಜಂಟಿ ನಿರ್ದೇಶಕ ಎಸ್.ಷಡಾಕ್ಷರಿ, ಬಳ್ಳಾರಿ ವಲಯ ಸಹಕಾರ ಇಲಾಖೆಯ ಉಪನಿರ್ದೇಶಕ ಬಿ.ಎ.ಕೇಸರಿಮಠ್, ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ, ಮುನಿರಾಬಾದ್‍ನ ಮೀನುಗಾರಿಕೆ ಉಪನಿರ್ದೇಶಕರಾದ ಕಣ್ಣಿಭಾಗ್ಯ, ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕ ಶಾಂತಕುಮಾರ ಸೇರಿದಂತೆ ಜಿಲ್ಲೆಯ ಮೀನು ಕೃಷಿಕರು, ಮೀನು ರೈತ ಉತ್ಪಾದಕರ ಸಂಸ್ಥೆ, ಮೀನುಗಾರರ ಸಹಕಾರ ಸಂಘದ ಸದಸ್ಯರು, ಮೀನು ಮಾರಾಟಗಾರರು, ಮೀನುಗಾರರು ಉಪಸ್ಥಿತರಿದ್ದರು.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)





ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ