ಮಂಗಳವಾರ, ಜುಲೈ 30, 2024

“ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ”ಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.30(ಕರ್ನಾಟಕ ವಾರ್ತೆ): ಕರ್ನಾಟಕ ಬಾಲವಿಕಾಸ ಅಕಾಡೆಮಿಯು 2023 ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ”ಯನ್ನು ನೀಡಲು ಉದ್ದೇಶಿಸಲಾಗಿದ್ದು, ಆಯ್ದ ಪುಸ್ತಕಗಳಿಂದ ಅರ್ಜಿ ಸಲ್ಲಿಸಬಹುದು. ಪುಸ್ತಕಗಳು ಆಯಾ ಸಾಲಿನ ಅವಧಿಯಲ್ಲಿ (ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ) ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, ಮಕ್ಕಳ ಕಾದಂಬರಿ (ಪಠ್ಯಾಧಾರಿತ ಬಿಟ್ಟು), ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶ ಕೃತಿ ಸೇರಿ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ. ಈ ಮೇಲ್ಕಂಡ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಪ್ರಶಸ್ತಿಗಾಗಿ ಪರಿಗಣಿಸಲು ಅಥವಾ ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಆಗಸ್ಟ್ 26 ರೊಳಗಾಗಿ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸಕ್ಕೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸಬೇಕು. ಪ್ರಶಸ್ತಿಗಾಗಿ ಮಾನದಂಡಗಳನ್ನು ಕಚೇರಿಯ ವೆಬ್‌ಸೈಟ್ ಲಿಂಕ್ http://balavikasaacademy.karnataka.gov.in/ ಗೆ ಭೇಟಿ ನೀಡಿ ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗಾಗಿ ಧಾರವಾಡದ ಲಕ್ಕಮ್ಮನಹಳ್ಳಿಯ ಕೆಹೆಚ್‌ಬಿ ಕಾಲೋನಿಯ ಚಂದ್ರಕಾ ಲೇಔಟ್ ಹಿಂಭಾಗದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ.0836-2461666 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ