ಮಂಗಳವಾರ, ಜುಲೈ 2, 2024
ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳ ನೇಮಕ: ಅರ್ಜಿ ಆಹ್ವಾನ
ಬಳ್ಳಾರಿ,ಜು.02(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ 182 ಗ್ರಾಮ ಒನ್ ಕೇಂದ್ರಗಳು ಮಂಜೂರು ಮಾಡಲಾಗಿದ್ದು, ಪ್ರಸ್ತುತ 153 ಕೇಂದ್ರಗಳು ಚಾಲನೆಯಲ್ಲಿವೆ. ಇನ್ನುಳಿದ ಕೇಂದ್ರಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ