ಬುಧವಾರ, ಜುಲೈ 3, 2024

‘ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು.03(ಕರ್ನಾಟಕ ವಾರ್ತೆ): ಪ್ರಸ್ತಕ ಸಾಲಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ದೇಶದಾದ್ಯಂತ ಶಿಕ್ಷಕರು ನೀಡಿರುವ ಅನನ್ಯ ಸೇವೆಯನ್ನು ಸ್ಮರಿಸಿ, ಅಂತಹ ಶಿಕ್ಷಕರಿಗೆ ನೀಡಲಾಗುವ ಪ್ರಶಸ್ತಿಗೆ ಜಿಲ್ಲೆಯ ಅರ್ಹ ಶಿಕ್ಷಕರು, ಮುಖ್ಯ ಶಿಕ್ಷಕರು ವೆಬ್‍ಸೈಟ್ ಕೊಂಡಿ http://nationalawardstoteachers.education.gov.in ಗೆ ಭೇಟಿ ನೀಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರತಿ ತಾಲ್ಲೂಕಿನಿಂದ ಕನಿಷ್ಠ 25 ರಿಂದ 30 ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ