ಸೋಮವಾರ, ಜುಲೈ 22, 2024
ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಜು.22(ಕರ್ನಾಟಕ ವಾರ್ತೆ):
ನಗರದ ಬ್ರೂಸ್‍ಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜು.21 ರಂದು ಬೀರಪ್ಪ ಗುಡಿ ಮುಂದೆ ಸುಮಾರು 50 ರಿಂದ 55 ವರ್ಷದ ಅನಾಮಧೇಯ ವ್ಯಕ್ತಿಯು ಮೂರ್ಛೆ ಹೋದ ಸ್ಥಿತಿಯಲ್ಲಿ ಕಂಡುಬಂದಿದ್ದು, ವಿಮ್ಸ್ ಅಸ್ಪತ್ರೆಯಲ್ಲಿ ದಾಖಲಿಸಿದಾಗ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದು, ವಾರಸುದಾರರ ಬಗ್ಗೆ ತಿಳಿದಿರುವುದಿಲ್ಲ. ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿಗಳು ಮನವಿ ಮಾಡಿದ್ದಾರೆ.
ಚಹರೆ ಗುರುತು: ಅಂದಾಜು 5.6 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ತಲೆಯಲ್ಲಿ ಒಂದೂವರೆ ಇಂಚಿನ ಬಿಳಿ ಮಿಶ್ರಿತ ಕೂದಲು, ಬಿಳಿ ಮಿಶ್ರಿತ ಕಪ್ಪು ಮೀಸೆ ಹೊಂದಿರುತ್ತಾನೆ.
ಮೃತನ ಮೈಮೇಲೆ ಬಿಳಿ ಬಣ್ಣದ ಸಣ್ಣ ಚೌಕಳಿಯ ಅಂಗಿ, ಕಲರ್ ಲುಂಗಿ, ಕೆಂಪು ಉಡುದಾರ ಇರುತ್ತದೆ.
ಅನಾಧೇಯ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ಸಂ.08392-258100, ಬ್ರೂಸ್‍ಪೇಟೆ ಪೊಲೀಸ್ ಠಾಣೆಯ ಮೊ.08392-272022, ಪಿಎಸ್‍ಐ ಮೊ.9480803081, ಪಿಐ ಮೊ.9480803045 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ