ಬುಧವಾರ, ಜುಲೈ 31, 2024
ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಜು.31(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಸಿರಿವಾರ ಗ್ರಾಮದ 3ಆರ್ ಕಾಲುವೆಯಲ್ಲಿ ಸುಮಾರು 60-65 ವ಼ರ್ಷದ ಅನಾಮಧೇಯ ಮೃತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ ಗುರುತು: ಅಂದಾಜು 5.4 ಅಡಿ ಎತ್ತರ, ಕೋಲುಮುಖ, ಕೆಂಪು ಮೈಬಣ್ಣ, ತಲೆಯಲ್ಲಿ 2-3 ಇಂಚು ಕಪ್ಪು ಮತ್ತು ಬಿಳಿ ಮಿಶ್ರಿತ ಕೂದಲು ಇದ್ದು, ತಲೆಗೆ ತೆರಚಿದ ರಕ್ತ ಗಾಯಗಳಿರುತ್ತವೆ. ಎರಡು ಕೈಗಳಿಗೆ ಮತ್ತು ಎರಡು ಕಾಲುಗಳಿಗೆ ತೆರಚಿದ ಗಾಯಗಳಿದ್ದು, ಕೊರಳಲ್ಲಿ ತಾಯತ ಹಾಗೂ ಸೊಂಟಕ್ಕೆ ಕೆಂಪು ಉಡುದಾರ ಇರುತ್ತದೆ. ಮೃತನ ಮೈಮೇಲೆ ಬಿಳಿ ಬಣ್ಣದ ನೀಲಿ ಗೀರುಳ್ಳ ತುಂಬು ತೋಳಿನ ಅಂಗಿ ಧರಿಸಿರುತ್ತಾನೆ.
ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100, ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಪಿ.ಐ ಮೊ.9480803049 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ