ಬುಧವಾರ, ಜುಲೈ 31, 2024
ಸೋಮಸಮುದ್ರ; ಆರೋಗ್ಯ ತಪಾಸಣೆ ಕಾರ್ಯಕ್ರಮ
ಬಳ್ಳಾರಿ,ಜು.31(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ರಾಷ್ಟಿçÃಯ ಆಯುಷ್ ಅಭಿಯಾನ, ಆಯುಷ್ಮಾನ್ ಭಾರತ್ ಯೋಜನೆಯಡಿ ಕೋಳೂರು ಆಯುಷ್ಮಾನ್ ಆರೋಗ್ಯ ಮಂದಿರ ವತಿಯಿಂದ ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದಲ್ಲಿ ಹಿರಿಯ ನಾಗರಿಕರಿಗೆ ಬುಧವಾರ ಉಚಿತ ಆರೋಗ್ಯ ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿತ್ತು.
ಶಿಬಿರದಲ್ಲಿ ಗ್ರಾಮಸ್ಥರು ಭಾಗವಹಿಸಿ, ಹಿರಿಯ ನಾಗರಿಕರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ರಕ್ತದೊತ್ತಡ, ಸಕ್ಕರೆ ಖಾಯಿಲೆ, ಮಲ ಬದ್ಧತೆ, ಮಂಡಿನೋವು, ಆರ್‌ಬಿಎಸ್ ಸೇರಿದಂತೆ ಮುಂತಾದ ಆರೋಗ್ಯ ಸಮಸ್ಯೆಗಳ ಪರಿಹಾರ ಕಂಡುಕೊAಡರು.
ಶಿಬಿರದಲ್ಲಿ 250ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷರು, ವೈದ್ಯರಾದ ಡಾ.ಕಲ್ಯಾಣಿ, ಡಾ.ರಾಜೇಶ್ವರಿ, ಡಾ.ಮಾಧುರಿ, ಡಾ.ಸುಜಾತ, ಡಾ.ತಿಪ್ಪೇಸ್ವಾಮಿ ಸೇರಿದಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾಕಾರ್ಯಕರ್ತೆಯರು ಹಾಗೂ ಇನ್ನೀತರರು ಇದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ