ಬುಧವಾರ, ಜುಲೈ 3, 2024
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಜೂ.03(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿನಲ್ಲಿ ಕೇಂದ್ರ ಸರ್ಕಾರವು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬಳ್ಳಾರಿ ಜಿಲ್ಲೆಯ ವ್ಯಕ್ತಿ, ಸಂಸ್ಥೆಗಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
*ಬೇಕಾದ ದಾಖಲೆಗಳು:*
2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ (ವೈಯಕ್ತಿಕ ವಿಭಾಗ), ಅರ್ಜಿದಾರರ ವ್ಯಕ್ತಿ, ಸಂಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆ, ಡ್ರಾಫ್ಟ್ ಸೈಟೇಷನ್(1 ಪುಟಕ್ಕೆ ಮೀರದಂತೆ) ಹಾಗೂ ಇತರೆ ದಾಖಲೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ತಿತಿತಿ.ಚಿತಿಚಿಡಿಜs.gov.iಟಿ ಮತ್ತು ತಿತಿತಿ.ಜeಠಿತಿಜ.gov.iಟಿ ವೆಬ್-ಸೈಟ್‍ಗೆ ಭೇಟಿ ನೀಡಬಹುದು. ಆನ್‍ಲೈನ್‍ನಲ್ಲಿ ತಮ್ಮ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳ ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಅರ್ಜಿಗಳನ್ನು ಜು.31 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ