ಶುಕ್ರವಾರ, ಜುಲೈ 19, 2024

ಯುವಕ ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಜು.19(ಕರ್ನಾಟಕ ವಾರ್ತೆ): ನಗರದ ನಲ್ಲಚೇರುವು ಪ್ರದೇಶದ ಜಾಗೃತಿ ನಗರದ ನಿವಾಸಿ ಕರಣ್‍ಸಿಂಗ್ ಎನ್ನುವ 22 ವರ್ಷದ ಯುವಕ ಜು.13 ರಂದು ಕಾಣೆಯಾಗಿದ್ದು, ಈ ಕುರಿತು ಬ್ರೂಸ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. ಯುವಕನ ಚಹರೆ ಗುರುತು: ಎತ್ತರ ಅಂದಾಜು 5.4 ಅಡಿ, ಕೋಲುಮುಖ, ಗೋಧಿ ಮೈಬಣ್ಣ, ಕಪ್ಪು ತಲೆಕೂದಲು, ಕುರಚಲು ಗಡ್ಡ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಅರ್ಧತೋಳಿನ ಕ್ರೀಂ ಬಣ್ಣದ ಚೆಕ್ಸ್ ಶರ್ಟ್ ಹಾಗೂ ನೀಲಿ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ. ಯುವಕನ ಬಗ್ಗೆ ಸುಳಿವು ಸಿಕ್ಕಲ್ಲಿ ಬ್ರೂಸ್‍ಪೇಟೆ ಪೊಲೀಸ್ ಠಾಣೆಯ ದೂ.08392-272022, ಪಿಐ ಮೊ.9480803045, 9480803081 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ