ಶನಿವಾರ, ಜುಲೈ 20, 2024

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ,ಜು.20(ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಈ ಹಿಂದೆ ನಿಗದಿ ಪಡಿಸಿದ್ದ ಅರ್ಜಿ ಸಲ್ಲಿಕೆಯ ಅವಧಿಯನ್ನು ಜು.31 ರ ವರೆಗೆ ವಿಸ್ತರಿಸಲಾಗಿದೆ. ವೆಬ್‍ಸೈಟ್ http://shp.karnataka.gov.in ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಅಥವಾ ದೂ.08932-200125/122 ಮತ್ತು ಬಳ್ಳಾರಿ ವಿಭಾಗದ ತಾಲ್ಲೂಕು ವಿಸ್ತರಣಾಧಿಕಾರಿಗಳ ಮೊ.8746818180 ಅಥವಾ ಆಯಾ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ