ಬುಧವಾರ, ಜುಲೈ 31, 2024
ರಸ್ತೆ ನಾಮಕರಣ; ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ
ಬಳ್ಳಾರಿ,ಜು.31(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ 1 ನೇ ವಾರ್ಡ್ನ ತಾಳೂರು ರಸ್ತೆಯ ಡಾ.ಪುನೀತ್ ರಾಜ್‌ಕುಮಾರ್ ರಸ್ತೆಯ ವೃತ್ತವನ್ನು ಶ್ರೀ ಮಹಾಯೋಗಿ ವೇಮನ ವೃತ್ತ ಎಂದು ನಾಮಕರಣ ಮಾಡುವುದಾಗಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ 30 ದಿನದೊಳಗಾಗಿ ಲಿಖಿತ ರೂಪದಲ್ಲಿ ಪಾಲಿಕೆ ಕಚೇರಿ ಸಲ್ಲಿಸಬಹುದು ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್ ಅವರು ತಿಳಿಸಿದ್ದಾರೆ.
ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದೇ ಇದ್ದಲ್ಲಿ ಸರ್ಕಾರದ ಸುತ್ತೋಲೆ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ