ಗುರುವಾರ, ಜುಲೈ 18, 2024

ಅಲ್ಟ್ರಾಸೋನೊಗ್ರಫಿ ಸ್ಕ್ಯಾನಿಂಗ್ ಸೇವೆ ಒದಗಿಸಲು ಅರ್ಹ ಸ್ಕ್ಯಾನಿಂಗ್ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಬಳ್ಳಾರಿ,ಜು.18(ಕರ್ನಾಟಕ ವಾರ್ತೆ): ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯ ಜೆಎಸ್‍ಎಸ್‍ಕೆ ಕಾರ್ಯಕ್ರಮದಡಿ ಜಿಲ್ಲೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿಯರಿಗೆ ಅಲ್ಟ್ರಾಸೋನೊಗ್ರಫಿ ಸ್ಕ್ಯಾನಿಂಗ್ ಸೇವೆ ಒದಗಿಸಲು ಆಸಕ್ತ ಸ್ಕ್ಯಾನಿಂಗ್ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ತಿಳಿಸಿದ್ದಾರೆ. ಆಸಕ್ತ ಖಾಸಗಿ ಸ್ಕ್ಯಾನಿಂಗ್ ಸಂಸ್ಥೆಯವರು ತಮ್ಮ ಅಗತ್ಯ ದಾಖಲಾತಿಗಳೊಂದಿಗೆ ಜು.23ರ ಸಂಜೆ 5 ಗಂಟೆ ಒಳಗಾಗಿ ಅರ್ಜಿ ಭರ್ತಿ ಮಾಡಿ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿಗಳ ಕಾರ್ಯಾಲಯ ಅಥವಾ ಮೊ.9449843102, 9448968514 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ