ಸೋಮವಾರ, ಜುಲೈ 29, 2024
ವಿಶೇಷ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ಬಳ್ಳಾರಿ,ಜು,29(ಕರ್ನಾಟಕ ವಾರ್ತೆ):
ನಗರದ ಕಂಟೋನ್‌ಮೆAಟ್‌ನ ಶಾಂತಿಧಾಮ ಆವರಣದ ಸರ್ಕಾರಿ ಕಿವುಡು ಮತ್ತು ಮೂಕ ಮಕ್ಕಳ ಪಾಠಶಾಲೆಯಲ್ಲಿ ವಿಶೇಷ ಶಿಕ್ಷಕರ 01 ಹುದ್ದೆಗೆ ಬಾಹ್ಯಮೂಲದಿಂದ ಅಂಶಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ತಮ್ಮ ವೈಯಕ್ತಿಕ ವಿವರಗಳೊಂದಿಗೆ ವಿದ್ಯಾರ್ಹತೆ (ವಿಶೇಷ ಡಿ.ಇಡಿ, ವಿಶೇಷ ಬಿ.ಇಡಿ) ಪ್ರಮಾಣಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜನ್ಮದಿನಾಂಕ ಪ್ರಮಾಣ ಪತ್ರ, ಆಧಾರ್‌ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ವಾಸಸ್ಥಳ ಪ್ರಮಾಣ ಪತ್ರ ಸೇರಿ ದೃಢೀಕೃತ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಆ.15 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷರ ಕಚೇರಿ ಅಥವಾ ದೂ.08392-297138, ಮೊ.9008485380, 9902106670 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆಯ ಅಧೀಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ