ಸೋಮವಾರ, ಜುಲೈ 22, 2024

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.22(ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಹೈನುಗಾರಿಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಸು-ಎಮ್ಮೆ ಖರೀದಿಗೆ ಬ್ಯಾಂಕ್‍ಗಳಿಂದ ಸಹಾಯಧನ ಒದಗಿಸಲು ಅರ್ಹ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ವಿನೋದ್ ಕುಮಾರ್ ತಿಳಿಸಿದ್ದಾರೆ. ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‍ಗಳಲ್ಲಿ ಪ್ರತಿ ಫಲಾನುಭವಿಗಳು ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ರೈತ ಮಹಿಳೆಯರಿಗೆ ಪ್ರತಿ ತ್ರೈಮಾಸಿಕವಾಗಿ ಪಾವತಿ ಮಾಡುವ ಬಡ್ಡಿ ಮೊತ್ತದಲ್ಲಿನ ಶೇ.6(ರೂ.3625) ರಾಜ್ಯ ಸರ್ಕಾರದಿಂದ ಸಹಾಯಧನ ರೂಪದಲ್ಲಿ ನೀಡುವ ಯೋಜನೆ ಜಾರಿಗೊಳಿಸಲಾಗಿದ್ದು, ವಾಣಿಜ್ಯ ಬ್ಯಾಂಕ್‍ಗಳ ಸಮನ್ವಯದೊಂದಿಗೆ ಅನುಷ್ಠಾನಗೊಳಿಸಲಾಗುವುದು. ರಾಷ್ಟ್ರೀಕೃತ ಬ್ಯಾಂಕ್, ಗ್ರಾಮೀಣ ಬ್ಯಾಂಕ್ ಹಾಗೂ ಸಹಕಾರ ಬ್ಯಾಂಕ್‍ಗಳಲ್ಲಿ ಸಾಲ ಪಡೆಯುವ ರೈತ ಮಹಿಳೆಯರು ಯೋಜನೆಯ ಸದುಪಯೋಗ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಪಶುವೈದ್ಯಕೀಯ ಸಂಸ್ಥೆ ಅಥವಾ ತಾಲೂಕು ಮಟ್ಟದ ಅಧಿಕಾರಿಗಳು ಅಥsÀವಾ ಬಳ್ಳಾರಿ-9448233756 ಸಂಡೂರು-9108334846 ಸಿರುಗುಪ್ಪ-7892855573 ಕಂಪ್ಲಿ-9964444527 ಕುರುಗೋಡು-7892209185 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ