ಶನಿವಾರ, ಜುಲೈ 20, 2024

ಪರಿಶಿಷ್ಟ ಪಂಗಡ ಇಲಾಖೆ: ಕಾನೂನು ವೃತ್ತಿ ತರಬೇತಿಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ,ಜು.20(ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಕಾನೂನು ವೃತ್ತಿ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜು.31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಅವರು ತಿಳಿಸಿದ್ದಾರೆ. ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ 2024-25 ನೇ ಸಾಲಿನ ಆಡಳಿತ ನ್ಯಾಯಾಧೀಕರಣದಲ್ಲಿ ಎರಡು ವರ್ಗಗಳ ವೃತ್ತಿ ತರಬೇತಿಯಲ್ಲಿ ಶಿಷ್ಯ ವೇತನ ನೀಡಲಾಗುತ್ತದೆ. ಅರ್ಹ ಪದವೀಧರರು ಇಲಾಖೆಯ ವೆಬ್‍ಸೈಟ್ www.tw.kar.nic.in ಗೆ ಭೇಟಿ ನೀಡಿ ಅರ್ಜಿಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೆರವು ಪ್ರದೇಶದಲ್ಲಿನ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ