ಸೋಮವಾರ, ಜುಲೈ 22, 2024
“ಜಿಲ್ಲಾ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಜು.22(ಕರ್ನಾಟಕ ವಾರ್ತೆ):
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಡಿ ನೀಡಲು ಉದ್ದೇಶಿಸಲಾಗಿರುವ “ಜಿಲ್ಲಾ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಗೆ ಅರ್ಹ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಡಳಿತ ಉಪ ನಿರ್ದೇಶಕರಾದ ಉಮಾದೇವಿ ಅವರು ತಿಳಿಸಿದ್ದಾರೆ.
ಆಸಕ್ತ ಅರ್ಹ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಜು.30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 05 ರಂದು ನಡೆಯುವ “ಶಿಕ್ಷಕರ ದಿನಾಚರಣೆ” ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ