ಮಂಗಳವಾರ, ಜುಲೈ 23, 2024
ಬಾಲಕ ಕಾಣೆ; ಪತ್ತೆಗೆ ಮನವಿ
ಬಳ್ಳಾರಿ,ಜು.23(ಕರ್ನಾಟಕ ವಾರ್ತೆ)
ನಗರದ ಕಂಟೋನ್‍ಮೆಂಟ್‍ನಲ್ಲಿನ ಸರ್ಕಾರಿ ಬಾಲಕರ ಮಂದಿರದ ಅಭಯ್.ಎಸ್ ಎನ್ನುವ 16 ವರ್ಷದ ಅಪ್ರಾಪ್ತ ಬಾಲಕ ಜು.19 ರಂದು ಬಾಲಕರ ಬಾಲ ಮಂದಿರದಿಂದ ಕಾಣೆಯಾಗಿರುವ ಕುರಿತು ಕೌಲ್‍ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ.
ಕಾಣೆಯಾದ ಬಾಲಕನ ಚಹರೆ:
ಎತ್ತರ 5.8 ಅಡಿ, ತೆಳುವಾದ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಹಸಿರು ಬಣ್ಣದ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಬಾಲಕನ ಬಗ್ಗೆ ಮಾಹಿತಿ ಸುಳಿವು ಸಿಕ್ಕಲ್ಲಿ ಕೌಲ್‍ಬಜಾರ್ ಪೊಲೀಸ್ ಠಾಣೆಯ ದೂ.08392-240731, 08392-244145, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100, ಪಿ.ಐ ಮೊ.9480803047, ಪಿಎಸ್‍ಐ ಮೊ.9480802085 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ