ಶನಿವಾರ, ಜುಲೈ 20, 2024
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ: ಎನ್‍ಜಿಓ ಸಂಸ್ಥೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಜು.20(ಕರ್ನಾಟಕ ವಾರ್ತೆ):
ಪ್ರಸಕ್ತ ಸಾಲಿಗೆ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಹೊಸ ಎನ್.ಜಿ.ಓ ಸಂಸ್ಥೆಗಳು ಕೇಂದ್ರ ಸರ್ಕಾರದ ಸಹಾಯಧನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಅವರು ತಿಳಿಸಿದ್ದಾರೆ.
ಎನ್.ಜಿ.ಓ. ಪೋರ್ಟ್‍ಲ್ (ngo.tribal.gov.in) ತೆರೆಯಲಾಗಿದ್ದು, ಜು.31 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಆಸಕ್ತ ಎನ್‍ಜಿಓ ಸಂಸ್ಥೆಯವರು ಕೇಂದ್ರ ಸರ್ಕಾರ ಹೊರಡಿಸಿರುವ ಪರಿಷ್ಕøತ ಮಾರ್ಗಸೂಚಿಯನ್ವಯ ಸ್ವೀಕೃತಿವಾಗುವ ಪ್ರಸ್ತಾವನೆಗಳನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ತಪಾಸಣಾ ವರದಿಯ ಶಿಫಾರಸ್ಸಿನೊಂದಿಗೆ ದೃಢೀಕೃತ ಪ್ರತಿಯನ್ನು ರಾಜ್ಯದ ಶಿಫಾರಸ್ಸಿನೊಂದಿಗೆ 45 ದಿನದೊಳಗಾಗಿ ಕಚೇರಿಗೆ ಹಾರ್ಡ್‍ಕಾಪಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚರೆವು ಪ್ರದೇಶದ ವಾಲ್ಮೀಕಿ ಭವನದಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ