ಶುಕ್ರವಾರ, ಜುಲೈ 26, 2024
ಅನಾಮಧೇಯ ಮೃತ ವ್ಯಕ್ತಿ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಜು.26(ಕರ್ನಾಟಕ ವಾರ್ತೆ):
ನಗರದ ಬೆಂಗಳೂರು ರಸ್ತೆಯ ಎಪಿಎಂಸಿ ಗೇಟ್ ಬಳಿಯ ಸಿಟಿ ಬಸ್ ನಿಲ್ದಾಣದಲ್ಲಿ ಅಂದಾಜು 45-50 ವರ್ಷದ ಅನಾಮಧೇಯ ವ್ಯಕ್ತಿಯು ಯಾವುದೋ ಖಾಯಿಲೆಯಿಂದ ಬಳಲುತ್ತಿದ್ದು, ಜು.24 ರಂದು ಮೃತ ಪಟ್ಟಿದ್ದು, ಮೃತನ ವಾರಸುದಾರರ ಪತ್ತೆಗೆ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯು ಪ್ರಕಟಣೆ ಹೊರಡಿಸಿದೆ.
ಮೃತನ ಚಹರೆ: ಎತ್ತರ ಅಂದಾಜು 5.5 ಅಡಿ, ಕೋಲು ಮುಖ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಅಂದಾಜು 1 ಇಂಚು ಉದ್ದದ ಕಪ್ಪು ಬಣ್ಣದ ಕೂದಲು, ಅರ್ಧ ಇಂಚು ಉದ್ದದ ಕಪ್ಪು ಮಿಶ್ರಿತ ಬಿಳಿ ಮೀಸೆ ಮತ್ತು 2 ಇಂಚು ಉದ್ದದ ಕಪ್ಪು ಮಿಶ್ರಿತ ಬಿಳಿ ಗಡ್ಡ ಇರುತ್ತದೆ.
ಮೃತನ ಬಲ ಮುಂಗೈ ಮೇಲೆ ಆಂಗ್ಲ ಭಾಷೆಯಲ್ಲಿ ‘ರುಕ್ಮಿಣಿ’, ಎಡಕೈ ಮೇಲೆ ಹಿಂದಿ ಭಾಷೆಯಲ್ಲಿ ‘ಯಾಸಿಮಾ’ ಎಂದು ಅಚ್ಚೆ ಹಾಕಿಸಿಕೊಂಡಿರುತ್ತಾನೆ.
ಮೃತನ ಮೈಮೇಲೆ ಮಾಸಿದ ನಸಿ ಬಣ್ಣದ ತುಂಬು ತೋಳಿನ ಟಿ-ಶರ್ಟ್, ಅದರ ಮೇಲೆ ಬಿಳಿ, ಆರೆಂಜ್ ಮತ್ತು ಕಪ್ಪು ನೀಲಿ ಬಣ್ಣದ ಟಿ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹೊಂದಿರುತ್ತಾನೆ.
ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033, ಮೊ.9480803096 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ:08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ