ಶನಿವಾರ, ಆಗಸ್ಟ್ 31, 2024
ಕೆಎಎಸ್, ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗೆ ಉಚಿತ ತರಬೇತಿ; ಸೆ.01 ರಂದು ಲಿಖಿತ ಪರೀಕ್ಷೆ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಖನಿಜ ಪ್ರತಿಷ್ಠಾನ ಅನುದಾನದಡಿ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಗೆ ಕೆಎಎಸ್, ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗೆ ಆಯ್ಕೆಯಾಗಲು ಉಚಿತ ತರಬೇತಿ ನೀಡಲು ಈಗಾಗಗಲೇ ನೋಂದಣಿಗೆ ಆಹ್ವಾನಿಸಲಾಗಿದ್ದು, ಲಿಖಿತ ಪರೀಕ್ಷೆಯು ಸೆ.01 ರಂದು ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಗೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
*ಪರೀಕ್ಷಾ ಕೇಂದ್ರಗಳು:*
ಬಳ್ಳಾರಿ ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಿರುಗುಪ್ಪದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸಂಡೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುರುಗೋಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕಂಪ್ಲಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು.
ನೋಂದಾಯಿಸಿಕೊAಡ ಅಭ್ಯರ್ಥಿಗಳು ಸೆ.01 ರಂದು ಬೆಳಿಗ್ಗೆ 10 ಗಂಟೆಗೆ ಆಯಾ ಕೇಂದ್ರಗಳಲ್ಲಿ ಹಾಜರಿರಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
‘ಆರೋಗ್ಯ ಸಿಂಚನ’ ಕಾರ್ಯಕ್ರಮ; ಮಕ್ಕಳೊಂದಿಗೆ ಬೆರೆತು ಯಶಸ್ವಿಗೊಳಿಸುವಂತೆ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಸೂಚನೆ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ) :
ಸುಭದ್ರ ಸಮಾಜ ನಿರ್ಮಾಣಕ್ಕೆ ತಳಪಾಯ ಹಾಕಲು ‘ಆರೋಗ್ಯ ಸಿಂಚನ’ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಆರೋಗ್ಯ ಜಾಗೃತಿಯ ಕಾರ್ಯಕ್ರಮವನ್ನು ಮಕ್ಕಳೊಂದಿಗೆ ಬೆರೆತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.
ಶನಿವಾರದಂದು, ಜಿಲ್ಲಾ ಪಂಚಾಯತ್ ನಜೀರ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಆರೋಗ್ಯ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳ 713 ಶಾಲೆಗಳಲ್ಲಿ 7 ರಿಂದ 10ನೇ ತರಗತಿಯ ಓದುತ್ತಿರುವ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ಸಿದ್ದಪಡಿಸಲಾದ ಈ ಕಾರ್ಯಕ್ರಮವನ್ನು ಸ್ಥಳೀಯ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಯಾವುದೇ ನ್ಯೂನತೆಗಳಿಲ್ಲದೇ ಪ್ರತಿಯೊಂದು ವಿಡಿಯೋ ಪ್ರದರ್ಶಿಸಬೇಕು ಎಂದರು.
ಬಳಿಕ ಮಕ್ಕಳೊಂದಿಗೆ ಸಂವಾದ ಕೈಗೊಂಡು ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಅಭಿಯಾನದ ರೀತಿಯಲ್ಲಿ ನಡೆಯುತ್ತಿರುವ ಆರೋಗ್ಯ ಸಿಂಚನ ಕಾರ್ಯಕ್ರಮವನ್ನು ರಾಜ್ಯ ಮಟ್ಟದಲ್ಲಿ ವಿಭಿನ್ನ ಕಾರ್ಯಕ್ರಮವಾಗಿ ಗುರ್ತಿಸಲು ಶ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಆರೋಗ್ಯದ ವಿಷಯಗಳನ್ನು ಮಕ್ಕಳಿಗೆ ಮನಮುಟ್ಟುವಂತೆ ಪರಿಣಾಮಕಾರಿಯಾಗಿ ತಿಳಿಸಿದಲ್ಲಿ ಮಾತ್ರ ತಮ್ಮ ಕುಟುಂಬದ ಸದಸ್ಯರಿಗೂ ಮಾಹಿತಿ ನೀಡುವ ಮೂಲಕ ಆರೋಗ್ಯಯುತ ಸಮಾಜ ಸೃಷ್ಟಿಸಬಹುದು ಎಂದರು.
ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ 14 ದಿನಗಳ ಕಾಲ ತರಬೇತಿ ಪಡೆದ ಸಿಬ್ಬಂದಿಯವರಿAದ ಕಂಪ್ಲಿ, ಸಿರುಗುಪ್ಪ ತಾಲ್ಲೂಕುಗಳ ಪೌಷ್ಟಿಕ ಪುನಶ್ಚೇತನ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ತಯಾರಿಕೆ ಕುರಿತು ಮಾಹಿತಿ ನೀಡಿ ಕೇಂದ್ರಗಳನ್ನು ಬಲಪಡಿಸುವ ಮೂಲಕ ಹೆಚ್ಚು ಮಕ್ಕಳನ್ನು ದಾಖಲಿಸಲು ಕ್ರಮವಹಿಸಿ ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಇಲ್ಲವಾದರೂ ಸಹ ಕೇರಳದಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಜಾಗ್ರತೆ ವಹಿಸಬೇಕು ಎಂದರು.
ಕುಟುAಬ ಕಲ್ಯಾಣ ತಾತ್ಕಾಲಿಕ ವಿಧಾನಗಳಾದ ನೋ-ಸ್ಕಾಲ್‌ಪೆಲ್ ವ್ಯಾಸೆಕ್ಟುಮಿ ವಿಧಾನವನ್ನು ಹೆಚ್ಚು ಜನಪ್ರಿಯಗೊಳಿಸಲು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಪರೀಕ್ಷೆಗೆ ಒಳಪಟ್ಟ ಮಕ್ಕಳನ್ನು ಚಿಕಿತ್ಸೆ ಅಗತ್ಯವಿದ್ದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಡಿಇಐಸಿ ಕೇಂದ್ರಕ್ಕೆ ಕಳುಹಿಸಿ ಶಸ್ತçಚಿಕಿತ್ಸೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಜಿಪಂ ಸಿಇಒ ಅವರು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶಬಾಬು ಅವರು ಮಾತನಾಡಿ, ಡೆಂಗ್ಯು ನಿಯಂತ್ರಣಕ್ಕಾಗಿ ತಂಡಗಳನ್ನು ರಚಿಸಿ ಲಾರ್ವಾ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ, ಆಸ್ಪತ್ರೆಗಳಲ್ಲಿ ಸಕಾಲದಲ್ಲಿ ಹೆರಿಗೆ ನಿರ್ವಹಣೆಗೆ ಹಾಗೂ ಎಲ್ಲ ಲಸಿಕೆಗಳನ್ನು ಮಕ್ಕಳಿಗೆ ಹಾಕಿಸಲು ಕ್ರಮವಹಿಸಲಾಗುತ್ತಿದೆ. ಹೆಚ್‌ಐವಿ ಕುರಿತು ಸಾರ್ವತ್ರಿಕವಾಗಿ ಪ್ರಚಾರ ನೀಡಲು ಕಾಲೇಜು ವಿದ್ಯಾರ್ಥಿಗಳ ಮೂಲಕ ಪ್ಲಾಶ್ ಮಾಬ್, ಕಬಡ್ಡಿ ಕ್ರೀಡೆ ಆಯೋಜಿಸಲಾಗುತ್ತಿದೆ ಮತ್ತು ಮಾನಸಿಕ ರೋಗಗಳ ಜಾಗೃತಿಗಾಗಿ 14416 ಉಚಿತ ಸಹಾಯವಾಣಿ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಶಸ್ತç ಚಿಕತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಪಶು ಸಂಗೋಪನಾ ಇಲಾಖೆಯ ಡಾ.ರಾಜಶೇಕರ್ ನಾಗೂರ್, ಐಎಮ್‌ಎ ಅಧ್ಯಕ್ಷ ಡಾ.ಶ್ರೀನಿವಾಸುಲು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ.ಹೆಚ್ ದಾಸಪ್ಪನವರ, ಡಿಎನ್‌ಒ ಗಿರೀಶ್, ಡಿಪಿಎಮ್ ವೆಂಕೋಬ ನಾಯ್ಕ ಸೇರಿದಂತೆ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವಿವಿಧ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
-------
ವಿಜಯನಗರ ಶ್ರೀಕೃಷ್ಣದೇವರಾಯ ವಿವಿ; ಸಂಭ್ರಮದ ಐದು ದಿನಗಳ ಯುವಜನೋತ್ಸವಕ್ಕೆ ತೆರೆ | ಶಿಕ್ಷಣಭ್ಯಾಸದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆ ಮುಖ್ಯ: ಕುಲಸಚಿವ ರುದ್ರೇಶ್.ಎನ್.ಎಸ್
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಪಠ್ಯೇತರ ಚಟುವಟಿಕೆಗಳಿಗೆ ಒಳಗಾಗದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಶಿಕ್ಷಣಭ್ಯಾಸದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಕುಲಸಚಿವ ರುದ್ರೇಶ್ ಎಸ್.ಎನ್ ಅವರು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮAದಿರದಲ್ಲಿ ರಾಷ್ಟಿçÃಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ಐದು ದಿನಗಳ “ರಾಜ್ಯ ಮಟ್ಟದ ಯುವಜನೋತ್ಸವ-2024”ದ ಕೊನೆಯ ದಿನ ಶನಿವಾರದಂದು ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಸೃಜನಶೀಲತೆ, ಪ್ರತಿಭೆ ಮತ್ತು ಉತ್ಸಾಹವನ್ನು ಬಿಂಬಿಸಲು ಇಂತಹ ವೇದಿಕೆಗಳು ಪ್ರಮುಖ ಪಾತ್ರವಹಿಸುತ್ತವೆ. ಪಠ್ಯಪುಸ್ತಕದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳನ್ನು ಭೌತಿಕವಾಗಿಯೂ ಮತ್ತು ಮಾನಸಿಕವಾಗಿಯೂ ಸದೃಢರನ್ನಾಗಿ ಮಾಡುತ್ತವೆ ಎಂದು ತಿಳಿಸಿದರು.
ವಿವಿಯ ರಾಷ್ಟಿçÃಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ಕುಮಾರ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವುದೇ ಯುವಜನೋತ್ಸವದ ಉದ್ದೇಶವಾಗಿದೆ ಎಂದರು. ಬಳಿಕ ಯುವಜನೋತ್ಸವ ಕುರಿತು ವರದಿ ವಾಚನ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥ ಡಾ.ಮೋಹನದಾಸ, ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ರಾಬರ್ಟ್ ಜೋಸ್, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಡಾ.ಶಶಿಧರ ಕೆಲ್ಲೂರ ಹಾಗೂ ವಿವಿಧ ವಿಶ್ವವಿದ್ಯಾಲಯಗಳ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳು, ರಾಷ್ಟಿçÃಯ ಸೇವಾಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಚೌಡಪ್ಪ ವಿ.ಎ., ಡಾ.ನಾಗರಾಜ್ ದಂಡೋತಿ, ಡಾ.ಭಾಗ್ಯಜ್ಯೋತಿ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಶಿಬಿರದಲ್ಲಿ ರಾಜ್ಯದ 21 ವಿಶ್ವವಿದ್ಯಾಲಯಗಳಿಂದ ಆಗಮಿಸಿರುವ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಐದು ದಿನಗಳ “ರಾಜ್ಯ ಮಟ್ಟದ ಯುವಜನೋತ್ಸವ 2024”ರ 10 ವಿವಿಧ ಸ್ಪರ್ಧೆಗಳಲ್ಲಿ ಮೊದಲನೇ ಸ್ಥಾನದಲ್ಲಿ ಸಮಗ್ರ ಪ್ರಶಸ್ತಿಯನ್ನು ಮಂಗಳೂರು ವಿಶ್ವವಿದ್ಯಾಲಯವು ಅಲಂಕರಿಸಿತು. ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಡೆದುಕೊಂಡಿತು.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಫಲಕಗಳನ್ನು ಹಾಗೂ ಪ್ರಮಾಣ ಪತ್ರಗಳನ್ನು ವಿವಿಯ ಕುಲಸಚಿವರು ವಿತರಿಸಿದರು.
ವಿವಿಧ ವಿಶ್ವವಿದ್ಯಾಲಯಗಳ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
*ವಿದ್ಯಾರ್ಥಿಗಳ ಅನಿಸಿಕೆ:*
‘ವಿವಿಯ ಅಧಿಕಾರಿಗಳು ಅಂತರ ಕಾಯ್ದು ಕೊಳ್ಳುತ್ತಾರೆ, ವಿಶ್ರೀಕೃವಿವಿ ಕುಲಸಚಿವರು ವಿದ್ಯಾರ್ಥಿಗಳ ಜೊತೆಗೆ ವಿದ್ಯಾರ್ಥಿಯಾಗಿ ನಮಗೆ ಸ್ಪೂರ್ತಿಯಾಗಿದ್ದಾರೆ’
- ಸುಜೇಯಕುಮಾರ ಶೆಟ್ಟಿ, ಮಂಗಳೂರು ವಿಶ್ವವಿದ್ಯಾಲಯ.
‘ಸಾಂಸ್ಕೃತಿ ಕಾರ್ಯಕ್ರಮಗಳು ಪಟ್ಟಣದ ಪ್ರದೇಶಗಳಲ್ಲಿ ಕಡಿಮೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಕಾಣಸಿಗುತ್ತವೆ.’
- ನಿತ್ಯಾ ಎಂ.ಸ್ವಾಮಿ, ದಯಾನಂದಸಾಗರ ವಿಶ್ವವಿದ್ಯಾಲಯ.
‘ಶಿಬಿರದಲ್ಲಿ ಕಲಿತಿರುವ ಮಾನವಿಯ ಮೌಲ್ಯಗಳು ಒಳ್ಳೆಯ ಅನುಭವವನ್ನು ನೀಡಿವೆ. ಮುಂಬರುವ ದಿನಗಳಲ್ಲಿ ಈ ವಿಶ್ವವಿದ್ಯಾಲಯವು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಮ್ಮರವಾಗಿ ವಿಶ್ವವಿದ್ಯಾಲಯ ಬೆಳೆಯಲಿದೆ’.
- ಅರ್ಪಿತಾ, ಬೆಂಗಳೂರು ವಿಶ್ವವಿದ್ಯಾಲಯ.
‘ವಿವಿಧ ಪ್ರದೇಶಗಳಿಂದ ಬಂದಿರುವ ವಿದ್ಯಾರ್ಥಿಗಳ ಜೊತೆ ಹೊಂದಿಕೊಳ್ಳುವುದು ಹೇಗೆ ಅಂತ ವಿಚಲಿತನಾಗಿದ್ದೆ, ವಿವಿಯ ಎಲ್ಲ ಅಧಿಕಾರಿಗಳು ಶಿಬಿರದಲ್ಲಿ ಸಹಕರಿಸಿ ಶಿಬಿರವನ್ನು ಯಶಸ್ವಿಯಾಗಿಸಿದರು.’
- ಪೂರ್ಣಚಂದ್ರ, ನಿಟ್ಟೆ ವಿಶ್ವವಿದ್ಯಾಲಯ.
---------------
ಆಹಾರ ಸುರಕ್ಷತೆ ಅಧಿಕಾರಿಗಳಿಂದ ವಿವಿಧೆಡೆ ಹೊಟೇಲ್, ರೆಸ್ಟೋರೆಂಟ್‌ಗಳಿಗೆ ಭೇಟಿ; ತಪಾಸಣೆ ಗುಣಮಟ್ಟದ ಆಹಾರ ಪೂರೈಕೆಗೆ ಆದ್ಯತೆ ನೀಡುವಂತೆ ಸೂಚನೆ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಆರೋಗ್ಯ ಸಚಿವರ ಆದೇಶದಂತೆ, ವಿಶೇಷ ಆಂದೋಲನ ಪ್ರಯುಕ್ತ ಎರಡನೇಯ ದಿನವಾದ ಶನಿವಾರದಂದು ಆಹಾರ ಸುರಕ್ಷತೆ ಅಧಿಕಾರಿಗಳಿಂದ ವಿವಿಧ ತಾಲ್ಲೂಕುಗಳ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ತಪಾಸಣೆ ಕೈಗೊಂಡರು.
ಸAಡೂರು ತಾಲ್ಲೂಕಿನ ಆಹಾರ ಸುರಕ್ಷತೆ ಅಧಿಕಾರಿ ಅಂಬದಾಸ್ ಅವರು ತೋರಣಗಲ್ ವ್ಯಾಪ್ತಿಯಲ್ಲಿ ಬರುವ ಬೀದಿ ಬದಿ ವ್ಯಾಪಾರಿಗಳ ಅಂಗಡಿ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿದರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ರ ಅಂಶಗಳನ್ನು ಪಾಲಿಸುತ್ತಿರುವ ಕುರಿತು ಖುದ್ದು ವಿಚಾರಿಸಿದರು.
ಆಹಾರ ನಿರ್ವಾಹಕರ ವೈಯಕ್ತಿಕ ಸ್ವಚ್ಛತೆ, ಆಹಾರದಲ್ಲಿ ಬಳಸುತ್ತಿರುವ ಕೃತಕ ಬಣ್ಣ, ಅಜಿನೋಮೋಟೊ (ಟೇಸ್ಟಿಂಗ್ ಪೌಡರ್), ಆಹಾರ ತಯಾರಿಸಲು ಬಳಸುತ್ತಿರುವ ನೀರು ಹಾಗೂ ಗ್ರಾಹಕರಿಗೆ ಕುಡಿಯಲು ನೀಡುತ್ತಿರುವ ನೀರು ಮತ್ತು ನೋಂದಣಿ ಅಥವಾ ಪರವಾನಿಗಿ ಪಡೆದಿರುವ ಬಗ್ಗೆ ತಪಾಸಣೆ ಕೈಗೊಂಡರು.
ಬಳಿಕ ಮಾತನಾಡಿದ ಆಹಾರ ಸುರಕ್ಷತೆ ಅಧಿಕಾರಿ ಅಂಬದಾಸ್ ಅವರು, 10 ಆಹಾರ ಪದಾರ್ಥಗಳ ಮಾದರಿಗಳನ್ನು ಸಹ ಸ್ಯಾಂಪಲ್ ಸಂಗ್ರಹಿಸಿ ವಿಶ್ಲೇಷಣೆಗಾಗಿ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಆಹಾರ ಪದಾರ್ಥಗಳ ವಿಶ್ಲೇಷಣಾ ವರದಿ ಬಂದ ನಂತರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅದೇರೀತಿಯಾಗಿ ಬಳ್ಳಾರಿ ತಾಲ್ಲೂಕಿನ ಆಹಾರ ಸುರಕ್ಷತೆ ಅಧಿಕಾರಿ ನಂದಾಕಡಿ ಅವರು, ಬಳ್ಳಾರಿ ತಾಲ್ಲೂಕಿನ ಹಲಕುಂದಿ ಗ್ರಾಮದ ಬೀದಿ ಬದಿ ವ್ಯಾಪಾರಿಗಳ ಮಳಿಗೆ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ತಪಾಸಣೆ ಕೈಗೊಂಡರು.
ಬಳಿಕ ಮಾತನಾಡಿದ ಅವರು, ತಪಾಸಣೆ ಸಮಯದಲ್ಲಿ ಕಂಡುಬAದ ಲೋಪಗಳಿಗೆ ನಿಯಮಾನುಸಾರ ತಿಳುವಳಿಕೆ ಪತ್ರವನ್ನು ಆಹಾರ ಉದ್ದಿಮೆದಾರರಿಗೆ ನೀಡಿ, ದಂಡ ವಿಧಿಸಲಾಗಿದೆ ಎಂದರು.
ಆಹಾರ ಉದ್ದಿಮೆದಾರರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಂಡುಬAದ ಲೋಪದೋಷಗಳನ್ನು ಒಂದು ವಾರದೊಳಗೆ ಸರಿಪಡಿಸಿಕೊಳ್ಳುವಂತೆ ಕಟ್ಟುನಿಟ್ಟಾಗಿ ನಿರ್ದೇಶಿಸಲಾಗಿದೆ ಎಂದು ಜಿಲ್ಲಾ ಅಂಕಿತ ಅಧಿಕಾರಿ ಡಾ.ಪ್ರಕಾಶ್ ಎಸ್ ಪುಣ್ಯಶೆಟ್ಟಿ ಅವರು ಎಚ್ಚರಿಕೆ ನೀಡಿದ್ದಾರೆ.
ತಪಾಸಣೆ ವೇಳೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಇದ್ದರು.
---------
ಸರ್ಕಾರಿ ಆದರ್ಶ ವಿದ್ಯಾಲಯ; ಸೆ.04 ರಂದು ಖಾಲಿ ಇರುವ ಸೀಟ್‌ಗಳಿಗೆ ಕೌನ್ಸೆಲಿಂಗ್
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ನಗರದ ಈದ್ಗಾ ರಸ್ತೆಯ ಹಿರಿಯಾಳಕುಡಂನ ಸರ್ಕಾರಿ ಆದರ್ಶ ವಿದ್ಯಾಲಯದ ಪ್ರಸಕ್ತ ಸಾಲಿಗೆ ಆರನೇ ತರಗತಿ ಪ್ರವೇಶಾತಿಗೆ ಖಾಲಿ ಇರುವ 5 ಸೀಟ್‌ಗಳಿಗೆ ಸೆ.04 ರಂದು ಬೆಳಿಗ್ಗೆ 10 ಗಂಟೆಗೆ ಶಾಲೆಯಲ್ಲಿ ನಡೆಯಲಿದೆ ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯ ಗುರುಗಳು ತಿಳಿಸಿದ್ದಾರೆ.
ಜಿಎಂ-02, 2ಎ-01, 3ಎ-02 ಸೀಟ್‌ಗಳಿಗೆ ಕೌನ್ಸೆಲಿಂಗ್ ನಡೆಯಲಿದ್ದು, ಆಯ್ಕೆ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳು ಹಾಜರಾಗಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಸಮಾಜ ಕಲ್ಯಾಣ ಇಲಾಖೆ; ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಮತ್ತು ಪ್ರೋತ್ಸಾಹಧನ ಕಾರ್ಯಕ್ರಮಗಳಡಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ www.sw.kar.nic.in ಅಥವಾ https://ssp.postmatric.karnataka.gov.in/homepage.aspx ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಬಹುದು.
*ಸೂಚನೆಗಳು*:
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಿ ಪ್ರಥಮ ಬಾರಿಗೆ, ಪ್ರಥಮ ಪ್ರಯತ್ನದಲ್ಲಿ ಪಾಸಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿ ವಿದ್ಯಾಥಿವೇತನ ಪಡೆದ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿಗೆ ಅರ್ಜಿ ಸಲ್ಲಿಸಬಹುದು.
ಕಳೆದ ಸಾಲಿನಲ್ಲಿ ವಿವಿಧ ಕಾರಣಗಳಿಂದ ವಿದ್ಯಾರ್ಥಿ ವೇತನ ಮಂಜೂರಾಗದ ಹಾಗೂ ರಿಜೆಕ್ಟ್ ಆಗಿರುವ ವಿದ್ಯಾರ್ಥಿಗಳು ಮಾತ್ರ ಪ್ರಸಕ್ತ ಸಾಲಿನಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗಳಿಗೆ ಎನ್‌ಪಿಸಿಐ ಆಧಾರ್ ಸೀಡಿಂಗ್ ಮಾಡಿಸಿರಬೇಕು. ತೊಂದರೆಯಿದ್ದಲ್ಲಿ ಅಂಚೆ ಕಚೇರಿಯಲ್ಲಿ ಖಾತೆಯನ್ನು ತೆರೆಯಬೇಕು. ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಪ್ರತಿ ಶೈಕ್ಷಣಿಕ ಸಾಲಿಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ಪ್ರಸಕ್ತ ಸಾಲಿನಿಂದ ಪ್ರತಿ ಶಾಲಾ ಮುಖ್ಯೋಪಾಧ್ಯಾಯರು, ಹಾಗೂ ಕಾಲೇಜು ಪ್ರಾಂಶುಪಾಲರು ಗಳಿಗೆ ಸಬಲೀಕರಣ ಅಧಿಕಾರಿ ಅಥವಾ ಸಂಸ್ಥೆಯ ನೋಡಲ್ ಅಧಿಕಾರಿಯನ್ನು ನಿಯೋಜಿಸಿದ್ದು, ತಾಲ್ಲೂಕು ಲಾಗಿನ್‌ನಲ್ಲಿ ಸೇರ್ಪಡೆ ಮಾಡಿಕೊಳ್ಳಲು ಕ್ರಮವಹಿಸಬೇಖು. ನಂತರ ಸೇರ್ಪಡೆಯಾದ ಅಧಿಕಾರಿಗಳ ಇ-ಕೆವೈಸಿ ವಿವರಗಳನ್ನು ಅಪ್ಡೇಟ್ ಮಾಡಿ ಅಪ್ರೂವ್ ಮಾಡುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಗರದ ಮೊದಲನೇ ರೈಲ್ವೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪಿ.ಮಮತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ನಗರದ ರೈಲ್ವೆ ನಿಲ್ದಾಣ ಫ್ಲಾಟ್ ಫಾರಂ ಸಂಖ್ಯೆ ಒಂದರಲ್ಲಿ ಶೈಲೂ ಎನ್ನುವ 06 ವರ್ಷದ ಹೆಣ್ಣು ಮಗು ಜು.19 ರಂದು ಪತ್ತೆಯಾಗಿದ್ದು, ಹೆಣ್ಣುಮಗುವಿನ ಪೋಷಕರ ಪತ್ತೆಗೆ ಸಹಕರಿಸಬೇಕೆಂದು ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮನವಿ ಮಾಡಿದ್ದಾರೆ.
*ಮಗುವಿನ ಚಹರೆ ವಿವರ:*
ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ.
ಈ ಮೇಲ್ಕಂಡ ಚಹರೆ ಗುರುತುಳ್ಳ ಹೆಣ್ಣು ಮಗುವಿನ ಪೋಷÀÀಕರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ರೈಲ್ವೇ ಪಿಎಸ್ ದೂ.08392-276063, ಮೊ.9480802131, ಇ-ಮೇಲ್ bellaryrly@ksp.gov.in ಅಥವಾ dcrly@ksp.gov.in ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಕಕರಾರಸಾ ನಿಗಮ; ಸೆ.02 ರಂದು ‘ಫೋನ್ ಇನ್ ಕಾರ್ಯಕ್ರಮ’
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ ಬಳ್ಳಾರಿ ಭಾಗದ ಸಾರ್ವಜನಿಕ ಪ್ರಯಾಣಿಕರ ಕುಂದು ಕೊರತೆಗಳನ್ನು ಆಲಿಸಲು ಸೆ.02 ರಂದು ಮಧ್ಯಾಹ್ನ 3.30 ಗಂಟೆಯಿAದ ಸಂಜೆ 5.30 ಗಂಟೆಯವರೆಗೆ “ಪೋನ್ ಇನ್ ಕಾರ್ಯಕ್ರಮ” ಏರ್ಪಡಿಸಲಾಗಿದೆ ಎಂದು ಕಕರಸಾ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ತಿಳಿಸಿದ್ದಾರೆ.
ಬಳ್ಳಾರಿ ಭಾಗದ ಸಾರ್ವಜನಿಕ ಪ್ರಯಾಣಿಕರ ಬಸ್ ಸೌಕರ್ಯದ ಕುರಿತು ಕುಂದು ಕೊರತೆ, ಸಮಸ್ಯೆಗಳಿದ್ದಲ್ಲಿ ಮೊ.7760992152, 6366423885 ಗೆ ಕರೆ ಮಾಡಿ ತಿಳಿಸಬಹುದು.
ಬಳ್ಳಾರಿ ವಿಭಾಗದ ವ್ಯಾಪ್ತಿಯಲ್ಲಿ ಪ್ರತಿ ತಿಂಗಳ ಒಂದನೇ ಸೋಮವಾರದಂದು ಬಳ್ಳಾರಿ, ಸಿರುಗುಪ್ಪ, ಕುರುಗೋಡು, ಕಂಪ್ಲಿ ಮತ್ತು ಸಂಡೂರು ತಾಲ್ಲೂಕುಗಳಿಗೆ ಸಂಬAಧಿಸಿದAತೆ ಸಾರ್ವಜನಿಕ ಪ್ರಯಾಣಿಕರ ಬಸ್ ಸೌಕರ್ಯದ ಕುರಿತು ಕುಂದು-ಕೊರತೆಗಳನ್ನು ಆಲಿಸಲು ‘ಪೋನ್ ಇನ್ ಕಾರ್ಯಕ್ರಮ’ ಆಯೋಜಿಸಲಾಗುತ್ತಿದೆ.
ಸಾರ್ವಜನಿಕ ಪ್ರಯಾಣಿಕರ ಬಸ್ ಸೌಕರ್ಯದ ಕುರಿತು ಕುಂದು ಕೊರತೆಗಳಿದ್ದಲ್ಲಿ ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಪ್ರಯಾಣಿಕರು “ಪೋನ್ ಇನ್ ಕಾರ್ಯಕ್ರಮ”ವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ತೋಟಗಾರಿಕೆ ಇಲಾಖೆ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆ ಬೆಳೆಯುವ ಹಾಗೂ ಬೆಳೆಯಲು ಇಚ್ಚಿಸಿರುವ ರೈತ ಫಲಾನುಭವಿಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಶೇ.90 ರಂತೆ ಗರಿಷ್ಠ 2 ಹೆಕ್ಟೇರ್‌ವರೆಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ.
ಅಲ್ಪಸಂಖ್ಯಾತ ವರ್ಗದವರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಅನುದಾನ ಮೀಸಲಿರಿಸಲಾಗಿದೆ.
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಿ, ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಕೃಷಿ ಇಲಾಖೆ; ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆಯಲ್ಲಿ ಬೆಳೆಯ ವಿವರ ದಾಖಲಿಸಲು ಅವಕಾಶ
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಖಾಸಗಿ ನಿವಾಸಿಗಳಿಂದ ರೈತರು ಬೆಳೆದ ಬೆಳೆಗಳ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಅಪ್ಲೋಡ್ ಮಾಡಲು ಅವಕಾಶವಿದ್ದು, ರೈತರು ಸೆ.30 ರೊಳಗಾಗಿ ಬೆಳೆ ಸಮೀಕ್ಷೆ ಅಪ್ಲೋಡ್ ಮಾಡಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ.
*ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶಗಳು:*
ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇಸ್ಟೋರ್‌ನಿಂದ ಬೆಳೆ ಸಮೀಕ್ಷೆ ಮುಂಗಾರು ಹಂಗಾಮಿನ “ಕ್ರಾಪ್ ಸರ್ವೇ ಖಾರಿಫ್ 2024” (Crop Survey Kharif 2024) ಆಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.
ಜಿಲ್ಲೆಯಲ್ಲಿ 350280 ಬೆಳೆ ತಾಕುಗಳಿದ್ದು, ಆ ತಾಕುಗಳಿಗೆ ರೈತರು ತಮ್ಮ ಬೆಳೆಗಳ ಮಾಹಿತಿಯನ್ನು ಸ್ವಯಂ ದಾಖಲಿಸಬೇಕು. ಮೊಬೈಲ್ ಆಪ್‌ನಲ್ಲಿ ಜಿಯೋ ರೆಫ್ರೆನ್ಸ್ಡ್ ಅಂಡ್ ಡಿಜಿಟೈಜ್‌ಡ್ (Geo Referenced and Digitized) ಬೆಳೆ ಗ್ರಾಮ ನಕಾಶೆ ಅಳವಡಿಸಲಾಗಿರುವುದರಿಂದ ಆಯಾ ತಾಕಿನ ಗಡಿ ರೇಖೆಯೊಳಗೆ ಹೋಗಿ ಜಿಪಿಎಸ್ ನಿಖರತೆ ಪಡೆದು ಛಾಯಾಚಿತ್ರದೊಂದಿಗೆ ರೈತರು ಬೆಳೆಯ ವಿವರಗಳನ್ನು ಎಲ್ಲಾ ಬೆಳೆಗಳ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು.
ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ಧಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟಿçÃಯ ಹಾಗೂ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿಯನ್ನು ಉಪಯೋಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ, ತೋಟಗಾರಿಕೆ, ಪಿ.ಆರ್ ಅಥವಾ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಶುಕ್ರವಾರ, ಆಗಸ್ಟ್ 30, 2024
ಆಹಾರ ಸುರಕ್ಷತೆ ಅಧಿಕಾರಿಗಳಿಂದ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಭೇಟಿ; ಆಹಾರ ಗುಣಮಟ್ಟ ತಪಾಸಣೆ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ವತಿಯಿಂದ ವಿಶೇಷ ಅಂದೋಲನದಡಿ ಆಹಾರ ಸುರಕ್ಷತೆ ಅಧಿಕಾರಿಗಳು ನಗರದ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಬೀದಿ ಬದಿ ತಿಂಡಿ-ದಿನಸಿ ವ್ಯಾಪಾರಿಗಳ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಆಹಾರ ಮತ್ತು ಗುಣಮಟ್ಟದ ಕುರಿತು ಶುಕ್ರವಾರ ತಪಾಸಣೆ ನಡೆಸಿದರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ರ ಅಂಶಗಳನ್ನು ಪಾಲಿಸದೇ ಇರುವ ಹಾಗೂ ಆಹಾರ ನಿರ್ವಾಹಕರ ವೈಯಕ್ತಿಕ ಸ್ವಚ್ಛತೆ, ಆಹಾರದಲ್ಲಿ ಬಳಸುತ್ತಿರುವ ಕೃತಕ ಬಣ್ಣ, ಅಜಿನೋಮೋಟೊ (ಟೇಸ್ಟಿಂಗ್ ಪೌಡರ್), ಆಹಾರ ತಯಾರಿಸಲು ಬಳಸುತ್ತಿರುವ ನೀರು, ಗ್ರಾಹಕರಿಗೆ ಕುಡಿಯಲು ನೀಡುತ್ತಿರುವ ನೀರು ಮತ್ತು ನೋಂದಣಿ ಅಥವಾ ಪರವಾನಿಗೆ ಪಡೆದಿರುವ ಮಾಹಿತಿ ಕಲೆ ಹಾಕಿದರು.
‘ಹತ್ತು ಆಹಾರ ಪದಾರ್ಥಗಳ ಮಾದರಿಗಳ ಸ್ಯಾಂಪಲ್ ಸಂಗ್ರಹಿಸಲಾಗಿದ್ದು, ವಿಶ್ಲೇಷಣೆಗಾಗಿ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ವಿಶ್ಲೇಷಣಾ ವರದಿ ಬಂದ ನಂತರ ಆಹಾರ ಸುರಕ್ಷತೆ ಮತ್ತುಗುಣಮಟ್ಟ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಆಹಾರ ಸುರಕ್ಷತೆ ಅಧಿಕಾರಿ ನಂದಾಕಡಿ ಅವರು ಹೇಳಿದರು.
ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯ ಜಿಲ್ಲಾ ಅಂಕಿತಾ ಅಧಿಕಾರಿ ಪ್ರಕಾಶ್.ಎಸ್‌ಪುಣ್ಯಶೆಟ್ಟಿ ಅವರ ಆದೇಶದ ಮೇರೆಗೆ ತಪಾಸಣೆ ಸಮಯದಲ್ಲಿ ಕಂಡುಬAದ ಲೋಪಗಳಿಗೆ ನಿಯಮಾನುಸಾರ ತಿಳುವಳಿಕಯ ಪತ್ರವನ್ನು ಆಹಾರ ಉದ್ದಿಮೆದಾರರಿಗೆ ನೀಡಲಾಗಿದ್ದು, ದಂಡ ಸಹ ವಿಧಿಸಲಾಗಿದೆ. ಭೇಟಿ ನೀಡಿದ ಸಂದರ್ಭದಲ್ಲಿ ಕಂಡುಬAದ ಲೋಪದೋಷಗಳನ್ನು ಒಂದು ವಾರದೊಳಗೆ ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ಈ ವೇಳೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಇನ್ನೀತರರು ಉಪಸ್ಥಿತರಿದ್ದರು.
----------
ಆ.31 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಆ.31 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ಜೆಸ್ಕಾಂ ಗ್ರಾಮೀಣ ಉಪ-ವಿಭಾಗದ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನ್‌ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಸೆ.01 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಾಹಣ ಕಾಮಗಾರಿಯನ್ನು ಹಮ್ಮಿಕೊಳ್ಳುತ್ತಿರುವುದರಿಂದ ಸೆ.01 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ಎಫ್-46 ಫೀಡರ್‌ನ ಪ್ರದೇಶಗಳಾದ ಇಂಡಸ್ಟಿçಯಲ್ ಏರಿಯಾ ಹಂತ-1, ಮಾರೆಮ್ಮನ ಗುಡಿ ಹಿಂದುಗಡೆ ಏರಿಯಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಇ.ಟಿ.ಲಕ್ಷಿö್ಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಬಳ್ಳಾರಿ: ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ರಾಜ್ಯ ಸರ್ಕಾರವು 2024-25 ನೇ ಸಾಲಿನ ಅಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಬಳ್ಳಾರಿ ಜಿಲ್ಲೆಯ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಗೆ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.
ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು ಎಂದು ಅವರು ತಿಳಿಸಿದ್ದಾರೆ.
ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ಇದರಿಂದ ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.
ಹಾಗಾಗಿ ಸಾರ್ವಜನಿಕರು ಎನಿವೇರ್ ನೋಂದಣಿ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ವಿಜಯನಗರ ಶ್ರೀಕೃಷ್ಣದೇವರಾಯ ವಿವಿ; ಘಟಿಕೋತ್ಸವದ ಆಮಂತ್ರಣ ಪತ್ರ ಪಡೆಯಲು ಸೂಚನೆ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವು ಸೆ.06 ರಂದು ನಡೆಯಲಿದ್ದು, ಆಮಂತ್ರಣ ಪತ್ರ ತಲುಪದ ಚಿನ್ನದ ಪದಕ, ಪ್ರಥಮ ರ‍್ಯಾಂಕ್ ಬಹುಮಾನ ವಿಜೇತ ವಿದ್ಯಾರ್ಥಿಗಳು ಮತ್ತು ಪಿಎಚ್.ಡಿ ಪದವಿಗೆ ಅರ್ಹರಾಗಿರುವ ವಿದ್ಯಾರ್ಥಿಗಳು ಸೆಪ್ಟೆಂಬರ್ 3ರ ಒಳಗಾಗಿ ಕಚೇರಿ ಸಮಯದಲ್ಲಿ ಹಾಜರಾಗಿ ಪಡೆದುಕೊಳ್ಳಬೇಕು ಎಂದು ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.
ಈಗಾಗಲೇ ಚಿನ್ನದ ಪದಕ, ರ‍್ಯಾಂಕ್ ಪಡೆದಿರುವ ವಿದ್ಯಾರ್ಥಿಗಳು ಮತ್ತು ಪಿಎಚ್.ಡಿ ಪದವಿಗೆ ಅರ್ಹರಾಗಿರುವ ವಿದ್ಯಾರ್ಥಿಗಳಿಗೆ ಪದವಿಗಳನ್ನು ಸ್ವೀಕರಿಸಲು ಸಮಾರಂಭಕ್ಕೆ ಹಾಜರಾಗುವಂತೆ ತಿಳಿಸಿ ಆಮಂತ್ರಣ ಪತ್ರ ಕಳುಹಿಸಲಾಗಿದೆ.
ಆಮಂತ್ರಣ ಪತ್ರ ತಲುಪದ ಅರ್ಹ ವಿದ್ಯಾರ್ಥಿಗಳು (ಪ್ರಾಚಾರ್ಯರು ನೀಡಿರುವ ಗುರುತಿನ ಪತ್ರದೊಂದಿಗೆ) ಖುದ್ದಾಗಿ ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗದ ಕಚೇರಿಯಲ್ಲಿ ಪಡೆಯಬಹುದು ಎಂದು ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಬಳ್ಳಾರಿ ಮಹಾನಗರ ಪಾಲಿಕೆ; ಆಸ್ತಿ ತೆರಿಗೆ ಪಾವತಿ ಅವಧಿ ವಿಸ್ತರಣೆ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿ ತೆರಿಗೆದಾರರು ತಮ್ಮ ಆಸ್ತಿಯ ತೆರಿಗೆ ಪಾವತಿ ಮಾಡಲು ಶೇ.5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಸೆ.14 ರವರೆಗೆ ವಿಸ್ತರಿಸಲಾಗಿದೆ.
ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸಲು ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು. ಆಸ್ತಿ ತೆರಿಗೆದಾರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.
---------
ಪ್ರಧಾನ ಮಂತ್ರಿಗಳ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಪ್ರಸ್ತಕ ಶೈಕ್ಷಣಿಕ ವರ್ಷದಲ್ಲಿ ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಪ್ರಕಾಶ್.ಎನ್.ಎಸ್ ಅವರು ತಿಳಿಸಿದ್ದಾರೆ.
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ, ಭಾರತೀಯ ವೈದ್ಯಕೀಯ ಮಂಡಳಿ, ಯುಜಿಸಿ ಯಂತಹ ಅಧಿಕೃತ ಸಂಸ್ಥೆಗಳಿAದ ಮಾನ್ಯತೆ ಪಡೆದ ಮೊದಲ ವೃತ್ತಿಪರ ಪದವಿ ಕೋರ್ಸ್ಗಳಾದ ಬಿಇ, ಬಿ ಟೆಕ್, ಬಿಡಿಎಸ್, ಎಂಬಿಬಿಎಸ್, ಬಿ ಎಡ್, ಬಿಬಿಎ, ಬಿಸಿಎ, ಬಿ-ಫಾರ್ಮ, ಬಿಇಡಿ, ಎಲ್‌ಎಲ್‌ಬಿ ಮತ್ತು ಸ್ನಾತಕೋತ್ತರ ಪದವಿಗಳಾದ ಎಂಬಿಎ, ಎಂಸಿಎ ಕೋರ್ಸ್ಗಳಲ್ಲಿ ಶೈಕ್ಷಣಿಕ ವರ್ಷ 2024-25 ರ ಮೊದಲನೇ ವರ್ಷದಲ್ಲಿ ಪ್ರವೇಶ ಪಡೆದವರು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಕೆಎಸ್‌ಬಿ ವೆಬ್‌ಸೈಟ್ ತಿತಿತಿ.ಞsb.gov.iಟಿ ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.0836-2440176 ಗೆ ಸಂಪರ್ಕಿಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಶೈಲಜಾ ಅವರಿಗೆ ಪಿಎಚ್‌ಡಿ ಪದವಿ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ತಾಲೂಕಿನ ಅಶೋಕ ನಗರ ಕ್ಯಾಂಪ್‌ನ ಶೈಲಜಾ.ಡಿ ಅವರಿಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಎಚ್‌ಡಿ ಪದವಿ ನೀಡಿದೆ.
ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಮತ್ತು ಮೌಲ್ಯಮಾಪನ ಕುಲಸಚಿವರಾದ ಪ್ರೊ.ರಮೇಶ್ ಓ ಓಲೇಕಾರ ಅವರ ಮಾರ್ಗದರ್ಶನದಲ್ಲಿ “ಗ್ರೀನ್ ಬ್ಯಾಂಕಿAಗ್ ಪ್ರಾö್ಯಕ್ಟೀಸಸ್ ಇನ್ ಸೆಲೆಕ್ಟೆಡ್ ಪಬ್ಲಿಕ್ ಅಂಡ್ ಪ್ರೆöÊವೇಟ್ ಸೆಕ್ಟರ್ ಬ್ಯಾಂಕ್ಸ್ - ಎ ಕಂಪೆರೇಟಿವ್ ಸ್ಟಡಿ” ಎಂಬ ವಿಷಯದ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪದವಿಯನ್ನು ನೀಡಲಾಗಿದೆ ಎಂದು ವಿವಿಯ ಪರೀಕ್ಷಾ ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದೆ.
--------
ಕಾನೂನು ಪದವಿಧರರ ವೃತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕಾನೂನು ಪದವಿಧರರ ವೃತ್ತಿ ತರಬೇತಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಛಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವಿಧರರು ಅರ್ಹರಾಗಿದ್ದು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ.
ಸೂಚನೆ:
ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜ್ಯೆನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ಮೀರಿರಬಾರದು. ಅಭ್ಯರ್ಥಿಗಳ ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸರಬೇಕು.
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆÀಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಪಾಸ್ ಮಾಡಿರುವ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷಗಳೊಳಗೆ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ದೂ.08392-200215, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಾಚರಣೆ
ಬಳ್ಳಾರಿ,ಆ.30(ಕರ್ನಾಟಕ ವಾರ್ತೆ):
ಸಂಡೂರು ತಾಲೂಕಿನ ತೋರಣಗಲ್ಲು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳ ಮೇಲೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಮಾರ್ಗದರ್ಶನದಂತೆ, ತಂಬಾಕು ನಿಯಂತ್ರಣ ಕೋಶದ ವತಿಯಿಂದ ಕಾರ್ಯಾಚರಣೆ ನಡೆಸಿ ಕೋಟ್ಪಾ ಕಾಯಿದೆ 2003ರ ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದ 20 ಅಂಗಡಿಗಳ ಮೇಲೆ ದಾಳಿ ಮಾಡಿ ದಂಡ ವಿಧಿಸಲಾಯಿತು.
ಬಳಿಕ ಕೋಟ್ಪಾ ಕಾಯ್ದೆ 2003 ಹಾಗೂ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಕುರಿತು ತಂಬಾಕು ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು.
ಈ ವೇಳೆ ಹಿರಿಯ ಆರೋಗ್ಯ ನಿರೀಕ್ಷಕ ಗೋವಿಂದಪ್ಪ, ಜಿಲ್ಲಾ ತಂಬಾಕು ಸಲಹೆಗಾರರಾದ ಪ್ರಶಾಂತ್, ಆಪ್ತ ಸಮಲೋಚಕ ಯಂಕಪ್ಪ, ಪೊಲೀಸ್ ಸಿಬ್ಬಂದಿ ಫಕ್ಕೀರಪ್ಪ ಹಾಗೂ ಸಮಾಜ ಕಾರ್ಯಕರ್ತೆ ಸರಸ್ವತಿ ಹಾಜರಿದ್ದರು.
----------
ಗುರುವಾರ, ಆಗಸ್ಟ್ 29, 2024
ಜಿಲ್ಲಾ ಮಟ್ಟದ “ಬಾಪೂಜಿ ಪ್ರಬಂಧ ಸ್ಪರ್ಧೆ" | ಅಚ್ಚುಕಟ್ಟಾಗಿ ಆಯೋಜಿಸುವಂತೆ ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್ ಸೂಚನೆ
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ಪ್ರೌಢಶಾಲಾ, ಕಾಲೇಜು ಹಾಗೂ ಪದವಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗುತ್ತಿರುವ ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯನ್ನು ಅಚ್ಚು ಕಟ್ಟಾಗಿ ಆಯೋಜಿಸಿ, ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಗಿರಿಜಾ ಶಂಕರ್ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಏರ್ಪಡಿಸುವ ನಿಟ್ಟಿನಲ್ಲಿ ಜಿಪಂ ಕಚೇರಿಯ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮಾಡುವುದರ ಮೂಲಕ ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಆಯೋಜಿಸಬೇಕು. ಜಿಲ್ಲೆಯ ಪ್ರತಿಯೊಂದು ತಾಲ್ಲೂಕುಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸುವಂತಾಗಬೇಕು. ಈ ಬಗ್ಗೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳು ಮುತುವರ್ಜಿ ವಹಿಸಿ, ಸ್ಪರ್ಧೆಯನ್ನು ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಗೆ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಖಾಸಗಿ ಮತ್ತು ಸರ್ಕಾರಿ ಪ್ರೌಢಶಾಲೆ, ಕಾಲೇಜು ಹಂತದಲ್ಲಿಯೇ ಸ್ಪರ್ಧೆ ಏರ್ಪಡಿಸಿ, ಸ್ಪರ್ಧೆಯ ಕುರಿತು ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳಿಗೆ ತಿಳಿಸಿ, ಅವರು ಸ್ಪರ್ಧೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಕ್ರಮ ವಹಿಸಬೇಕು. ಪ್ರೌಢಶಾಲಾ ವಿಭಾಗದ ಸ್ಪರ್ಧೆಯಲ್ಲಿ ಅತ್ಯುತ್ತಮ 03 ಪ್ರಬಂಧದ ಫಲಿತಾಂಶವನ್ನು ಡಿಡಿಪಿಐ, ಡಿಡಿಪಿಯು ಹಾಗೂ ಪದವಿ-ಸ್ನಾತಕೋತ್ತರ ಪದವಿ ವಿಭಾಗದ ಫಲಿತಾಂಶವನ್ನು ಸೆಪ್ಟೆಂಬರ್ 08 ರೊಳಗೆ ಜಿಲ್ಲಾ ವಾರ್ತಾಧಿಕಾರಿಗಳಿಗೆ ತಲುಪಿಸಬೇಕು ಎಂದು ತಿಳಿಸಿದರು.
ಸ್ಪರ್ಧೆಯ ನಿಬಂಧನೆಗಳನ್ನು ತಪ್ಪದೆ ಪಾಲಿಸಬೇಕು. ಪ್ರೌಢಶಾಲೆ ವಿಭಾಗ, ಪದವಿಪೂರ್ವ ವಿಭಾಗ, ಪದವಿ-ಸ್ನಾತಕೋತ್ತರ ಪದವಿ ವಿಭಾಗಕ್ಕೆ ಪ್ರತ್ಯೇಕ ಬಹುಮಾನಗಳಿರುವುದರಿಂದ, ಪದವಿಪೂರ್ವ ವಿಭಾಗ, ಪದವಿ-ಸ್ನಾತಕೋತ್ತರ ಪದವಿ ವಿಭಾಗದ ಸ್ಪರ್ಧೆಯಲ್ಲಿ ಪ್ರಬಂಧಗಳನ್ನು ಅತ್ಯಂತ ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿಸಿ, ಅತ್ಯುತ್ತಮ ಪ್ರಬಂಧ ಬರೆದು ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಕ್ಕೆ ಆಯ್ಕೆಯಾದವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ವಿವರವುಳ್ಳ ಫಲಿತಾಂಶ ಮತ್ತು ಬಹುಮಾನಕ್ಕೆ ಆಯ್ಕೆಯಾದ ಮೂಲ ಪ್ರಬಂಧಗಳ ಪ್ರತಿಗಳನ್ನು, ಇದರ ಜೊತೆಗೆ ಜಿಲ್ಲೆಯಲ್ಲಿ ಒಟ್ಟಾರೆ ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳ ತಾಲ್ಲೂಕುವಾರು ಸಂಖ್ಯಾ ವಿವರವನ್ನು ಕ್ರೋಢೀಕರಿಸಿ ಜಿಲ್ಲಾ ವಾರ್ತಾಧಿಕಾರಿಗಳಿಗೆ ತಪ್ಪದೆ ತಲುಪಿಸಬೇಕು ಎಂದು ಜಿಪಂ ಉಪಕಾರ್ಯದರ್ಶಿಯವರು ಹೇಳಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕರಾದ ವೇದಾವತಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ ಉಪಸ್ಥಿತರಿದ್ದರು.
------------
ಆ.30, 31 ರಂದು ಜಿಲ್ಲೆಯಾದ್ಯಂತ ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಪರಿಶೀಲನೆ
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ಜಿಲ್ಲಾ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ವತಿಯಿಂದ ಆ.30 ಮತ್ತು 31 ರಂದು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಆಹಾರ ಸುರಕ್ಷತೆ ಬಗ್ಗೆ ವಿಶೇಷ ತಪಾಸಣೆಯನ್ನು ನಡೆಸಲಾಗುವುದು ಎಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಅಂಕಿತ ಅಧಿಕಾರಿ ಡಾ.ಪ್ರಕಾಶ್ ಎಸ್ ಪುಣ್ಯಶೆಟ್ಟಿ ಅವರು ತಿಳಿಸಿದ್ದಾರೆ.
ಆಹಾರ ಸುರಕ್ಷತೆ ಅಧಿಕಾರಿಗಳ ತಂಡವು ಭೇಟಿ ನೀಡಿ ಪರಿಶೀಲಿಸಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಯ್ದೆ ಕುರಿತು ಸಾರ್ವಜನಿಕರಿಗೆ ಹಾಗೂ ಹೋಟೆಲ್, ರೆಸ್ಟೋರೆಂಟ್ ಆಹಾರ ಉದ್ದಿಮೆದಾರರಿಗೆ ಜಾಗೃತಿ ಅರಿವು ಮೂಡಿಸಲಾಗುವುದು ಮತ್ತು ಮಾಂಸ, ಮೀನು, ಮೊಟ್ಟೆಗಳ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಲಾಗುವುದು.
ಆಹಾರ ಉದ್ದಿಮೆದಾರರು ಸ್ವಚ್ಛತೆ ಹಾಗೂ ನೈರ್ಮಲ್ಯತೆ ಕಾಪಾಡಿಕೊಳ್ಳುವುದರ ಬಗ್ಗೆ ಜೊತೆಗೆ ಐಇಸಿ ಚಟುವಟಿಕೆಗಳ ಮೂಲಕ ಆಹಾರ ಉದ್ದಿಮೆದಾರರಿಗೆ ನೋಂದಣಿ ಅಥವಾ ಪರವಾನಿಗೆ ಆಂದೋಲವನ್ನು ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ರಾಷ್ಟಿçÃಯ ಕ್ರೀಡಾ ದಿನಾಚರಣೆ | ಯುವ ಸಮೂಹ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು: ಪ್ರೊ.ಎಂ.ಮುನಿರಾಜು
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ದೇಶದ ಯುವಕರನ್ನು ಕ್ರೀಡೆಯಲ್ಲಿ ಭಾಗವಹಿಸುವಂತೆ ಉತ್ತೇಜಿಸಲು, ಕ್ರೀಡಾಪಟುಗಳನ್ನು ಮುಖ್ಯವಾಹಿನಿಗೆ ಕರೆತರಲು ರಾಷ್ಟಿçÃಯ ಕ್ರೀಡಾದಿನವನ್ನು ದೇಶದಾದ್ಯಂತ ಆಚರಣೆ ಮಾಡಲಾಗುತ್ತಿದ್ದು, ಯುವ ಸಮೂಹವು ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕುಲಪತಿ ಪ್ರೊ.ಎಂ.ಮುನಿರಾಜು ಅವರು ಕರೆ ನೀಡಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಮತ್ತು ಕ್ರೀಡಾ ವಿಜ್ಞಾನ ವಿಭಾಗ ವತಿಯಿಂದ ರಾಷ್ಟಿçÃಯ ಕ್ರೀಡಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಗುರುವಾರ ಆಯೋಜಿಸಿದ್ದ ಖೊ-ಖೊ ಪಂದ್ಯಾವಳಿಯನ್ನು ಮೇಜರ್ ಧ್ಯಾನ್‌ಚಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಗಳು ನಮ್ಮನ್ನು ನಾವು ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯವಾಗಿರುವಂತೆ ಮಾಡುತ್ತವೆ. ನಮ್ಮಲ್ಲಿರುವ ಹಿಂಜರಿಕೆಯನ್ನು ತೊರೆದು, ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ ಸ್ಫರ್ಧಾ ಮನೋಭಾವ ತೋರಿಸಬೇಕು ಎಂದು ಹೇಳಿದರು.
ವಿವಿಯ ರಾಷ್ಟಿçÃಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ಕುಮಾರ್ ಅವರು ಮಾತನಾಡಿ, ಸಮಾಜ ವಿಜ್ಞಾನ ನಿಕಾಯದ ವಿಭಾಗಗಳಿಗೆ ಸ್ವಂತ ಕಟ್ಟಡದ ಕೊರತೆಯಿದ್ದು, ಒದಗಿಸಿಕೊಟ್ಟಲ್ಲಿ ನಿಕಾಯದ ವಿದ್ಯಾರ್ಥಿಗಳಿಗೆ ಕ್ರೀಡೆ ಮತ್ತು ಇನ್ನಿತರ ಚಟುವಟಿಕೆಗಳಲ್ಲಿ ಭಾಗವಹಿಸಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಕುಲಪತಿಗಳು ಚಿಂತನೆ ನಡೆಸಬೇಕು ಎಂದು ಮನವಿ ಮಾಡಿದರು.
ಮೇಜರ್ ಧ್ಯಾನ್Àಚಂದ್ ಸ್ಮರಣಾರ್ಥ ಆಯೋಜಿಸಿದ್ದ ಖೊ-ಖೊ ಪಂದ್ಯಾವಳಿಯಲ್ಲಿ ವಿಜೇತರಾದ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕುಲಪತಿಗಳು ಟ್ರೋಫಿ ವಿತರಿಸಿದರು.
ವಿಭಾಗದ ಮುಖ್ಯಸ್ಥರಾದ ಡಾ. ಶಶಿಧರ ಕೆಲ್ಲೂರ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ದೈಹಿಕ ಶಿಕ್ಷಣ ಮತ್ತು ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಸಂಪತ್ ಕುಮಾರ, ಅತಿಥಿ ಉಪನ್ಯಾಸಕರಾದ ಮಹೇಶ, ರಾಜೇಶ, ವಿದ್ಯಾರ್ಥಿಗಳಾದ ಶಿವಪುತ್ರ, ನಾಗರಾಜ ಸೇರಿದಂತೆ ಸಂಶೋಧನಾ ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
---------
ಕೃಷಿ ಇಲಾಖೆ; ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ಅರ್ಜಿ ಆಹ್ವಾನ
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ):
ಕೃಷಿ ಇಲಾಖೆ ವತಿಯಿಂದ ಕ್ಷೇತ್ರದಲ್ಲಿ ಯಂತ್ರೋಪಕರಣಗಳ ಬಳಕೆ ಅಧಿಕ ಮಾಡುವ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು, ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಂ. ಸೋಮಸುಂದರ ತಿಳಿಸಿದ್ದಾರೆ.
ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಅನುಷ್ಟಾನ ಮಾಡಲು ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳು, ಸೇವಾದಾರ ಸಂಸ್ಥೆಗಳು, ವೈಯಕ್ತಿಕ ಫಲಾನುಭವಿಗಳು ಹಾಗೂ ನೊಂದಾಯಿತ ಸಂಘ ಸಂಸ್ಥೆಗಳು ಎಫ್‌ಪಿಓ ಸಂಸ್ಥೆಗಳು ಯೋಜನೆಗೆ ಅರ್ಹರಾಗಿದ್ದು, ಆಸಕ್ತ ರೈತರು ಸಂಬAಧಿಸಿದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸೆ.24 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯನ್ನು ಅನುಷ್ಟಾನ ಮಾಡಲು ಸರ್ಕಾರದ ಆದೇಶವಾಗಿದ್ದು, ಈ ಯಂತ್ರಗಳನ್ನು ಬಾಡಿಗೆಗೆ ನೀಡುವ ಮೂಲಕ ರೈತರು ಹೆಚ್ಚುವರಿ ಆದಾಯ ಪಡೆಯಬಹುದಾಗಿದೆ. ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಬೆಳೆಯ ವಿಧ ಮತ್ತು ಕಟಾವು ಅವಧಿಯ ಆಧಾರದ ಮೇಲೆ ಕಾರಿಡಾರ್ ಮಾದರಿಯಲ್ಲಿ ಸ್ಥಾಪಿಸಬಹುದು.
ಸಾಮಾನ್ಯ ವರ್ಗದ ರೈತರಿಗೆ ಗರಿಷ್ಠ ಶೇ.50 ರಂತೆ ಗರಿಷ್ಟ ರೂ.40 ಲಕ್ಷ ಸಹಾಯಧನ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಗರಿಷ್ಠ ಶೇ.70ರಂತೆ ಹಾಗೂ ಸಂಘ-ಸAಸ್ಥೆಗಳಿಗೆ ಚಾಲ್ತಿಯಲ್ಲಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆ, ಎಫ್‌ಪಿಓಗಳನ್ನೊಳಗೊಂಡAತೆ ಗರಿಷ್ಠ ಶೇ.70 ರಂತೆ ಗರಿಷ್ಟ ರೂ.50 ಸಹಾಯಧನ ನೀಡಲಾಗುತ್ತದೆ.
ಸಂಘ-ಸAಸ್ಥೆಗಳು, ಎಫ್‌ಪಿಓಗಳನ್ನೊಳಗೊಂಡAತೆ ಟ್ರಸ್ಟ್ಗಳು ಮಾತ್ರ ಕಂಬೈAಡ್ ಹಾರ್ವೆಸ್ಟರ್ ಮತ್ತು ಶುಗರ್‌ಕೇನ್ ಹಾರ್ವೆಸ್ಟರ್‌ಗಳನ್ನು ಒಳಗೊಂಡ “ಕೋಂಬೊ ಹಾರ್ವೆಸ್ಟರ್ ಹಬ್” ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
ಕೃಷಿ ಯಂತ್ರೋಪಕರಣವಾರು ನಿಗದಿಪಡಿಸಿದ ಗರಿಷ್ಠ ಸಹಾಯಧನವನ್ನು ಒದಗಿಸಲಾಗಲಿದ್ದು, ಸಹಾಯಧನವನ್ನು ಕ್ರೆಡಿಟ್ ಲಿಂಕ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮುಖಾಂತರ ಬಿಡುಗಡೆ ಮಾಡಲಾಗುತ್ತದೆ.
ಆಯ್ಕೆಯಾದ ಫಲಾನುಭವಿಗಳು ಅಥವಾ ಸಂಘ-ಸAಸ್ಥೆಗಳು ಕೃಷಿ ಮೂಲಭೂತ ಸೌಕರ್ಯ ನಿಧಿ ಸಾಲದ ನೆರವನ್ನು ಪಡೆಯಲು ಸಹ ಅವಕಾಶವಿರುತ್ತದೆ.
ಸಹಕಾರ ಸಂಘಗಳ ನಿಬಂಧನೆಯAತೆ ಕಂಪನಿ ಕಾಯ್ದೆಯಡಿ ನೊಂದಾಯಿಸಿದ ಸಂಘ-ಸAಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತವೆ. ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳ, ಕೃಷಿ ಯಂತ್ರೋಪಕರಣಗಳ ಬ್ಯಾಂಕ್, ರೈತ ಉತ್ಪಾದಕ ಸಂಸ್ಥೆಗಳು, ಇತರೆ ಸಂಘ-ಸAಸ್ಥೆಗಳು ರಾಜ್ಯಾದ್ಯಂತ ಅರ್ಜಿಗಳನ್ನು ಸಲ್ಲಿಸಬಹುದು.
ಆರು ಅಥವಾ ಒಂಬತ್ತು ವರ್ಷಗಳ ಕಾಲ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ತಪಾಸಣೆಯಲ್ಲಿ ಸಂಪೂರ್ಣವಾಗಿ ಲೆಕ್ಕ-ಪತ್ರ ಹಾಗೂ ಯಂತ್ರೋಪಕರಣಗಳನ್ನು ಹಾಜರುಪಡಿಸಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಬಹುಹುದು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಮೊ.8277934298 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಅನಾಮಧೇಯ ಮೃತ ಮಹಿಳೆಯ ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಆ.29(ಕರ್ನಾಟಕ ವಾರ್ತೆ);
ಬಳ್ಳಾರಿಉ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 40-45 ವರ್ಷದ ಅನಾಮಧೇಯ ಮಹಿಳೆಯ ಶವವು ತಿರುಮಲನಗರದ ಕಾಲುವೆ ಡಿ.ಪಿ. ನಂ.15 ರ 6 ಎಲ್ ಉಪ ಕಾಲುವೆಯಲ್ಲಿ ಆ.28 ರಂದು ಕಂಡುಬAದಿದ್ದು, ವಾರಸುದರರು ತಿಳಿದಿರುವುದಿಲ್ಲ. ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಮೃತಳ ಚಹರೆ: ಎತ್ತರ 5.4 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಧೃಡವಾದ ಮೈಕಟ್ಟು ಹೊಂದಿದ್ದು, ಮೃತಳ ಮೈಮೇಲೆ ಗುಲಾಬಿ ಬಣ್ಣ ಲಂಗ ತುಂಡು, ಪರ್ಪಲ್ ಬಣ್ಣದ ಕುಪ್ಪಸ ಇರುತ್ತದೆ. ದೇಹವು ಕೊಳೆತ ಸ್ಥಿತಿಯಲ್ಲಿರುತ್ತದೆ.
ಮೃತಳ ವಾರಸುದಾರರ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ದೂ.08392-276461, ಪಿ.ಐ ಮೊ.9480803049 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ಬುಧವಾರ, ಆಗಸ್ಟ್ 28, 2024
ಆ.30 ಮತ್ತು 31 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಕುರುಗೊಡು ಉಪ-ಕೇಂದ್ರದ 110/33/11ಕೆವಿಯಿಂದ ವಿದ್ಯುತ್ ಸರಬರಾಜು ಆಗುವ ಎಫ್-2 ಮತ್ತು ಎಫ್-7 ಕೃಷಿ ಮಾರ್ಗದ ವೈ ಅಪರೇಷನ್ ಲಿಂಕ್‌ಲೈನ್ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುವುದರಿಂದ ಆ.30 ಮತ್ತು 31 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಜೆಸ್ಕಾಂನ ಗ್ರಾಮೀಣ ಉಪವಿಭಾಗದ ಕಾರ್ಯ ಮತ್ತು ಪಾಲನಾದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನ್ ಬಾಬು ಅವರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-2 ಗೆಣಿಕೆಹಾಳ್ ಐಪಿ ಫೀಡರ್(ಎಫ್-14 ಪೀಡರ್ ಮಾರ್ಗದ ಹೊಸಗೆಣಿಕೆಹಾಳ್, ಹಳೇಗೆಣಿಕೆಹಾಳ್ ಬಸವಪುರ, ಅನ್ನಪೂರ್ಣೇಶ್ವರಿ ಕ್ಯಾಂಪ್, ವದ್ದಟ್ಟಿ, ಕ್ರಾಸ್ ಗ್ರಾಮಗಳು. ಎಫ್-7 ಬಾದನಹಟ್ಟಿ ಐ.ಪಿ ಮಾರ್ಗದ ಬಾದನಹಟ್ಟಿ, ವದ್ದಟ್ಟಿ, ರ‍್ರಂಗಳಿ, ಸಿಂಧಿಗೇರಿ, ರ‍್ರಿಂಗಳಿ, ಮಾರುತಿ ಕ್ಯಾಂಪ್, ಗಂಗಾಭವಾನಿಕ್ಯಾAಪ್, ಸಪ್ತಗಿರಿಕ್ಯಾಂಪ್.
ಎಫ್-4 ಹೆಚ್.ವೀರಾಪುರ ಎನ್.ಜೆ.ವೈ, ಮಾರ್ಗದ ಹೆಚ್. ವೀರಾಪುರ, ಸೋಮಲಾಪುರ ಕ್ರಾಸ್, ಮಾರಿತಿಕ್ಯಾಂಪ್, ಹೊಸ ಯಲ್ಲಾಪುರ, ಹಳೇ ಯಾಲ್ಲಾಪುರ, ಶ್ರೀನಿವಾಸಕ್ಯಾಂಪ್, ಲಕ್ಷಿö್ಮÃಪುರ, ಕಲ್ಲುಕಂಬ, ಚಿಟಿಗಿನಹಾಳ್, ಅರ್ಜುನ್ ಕ್ಯಾಂಪ್, ಮಠದ ಕ್ಯಾಂಪ್, ಕೆರೆಕೆರೆ ಗ್ರಾಮಗಳು. ಎಫ್-5 ಸಿಂಧಿಗೇರಿ ಐ.ಪಿ ಮಾರ್ಗದ ಬೈಲೂರು, ಮಲ್ಲೇಶ್ವರಕ್ಯಾಂಪ್, ಗೋಪಾಲಪುರ ಕ್ಯಾಂಪ್, ಗೋಳೆಪ್ಪ ಮಠ.
ಎಫ್-8 ಎಲ್.ಐ.ಎಸ್ ಎನ್.ಜೆ.ವೈ ಮಾರ್ಗದ ಹೊಸಗೆಣಿಕೆಹಾಳ್, ಹಳೇ ಗೆಣಿಕೆಹಾಳ್, ಕ್ಯಾದಿಗೆಹಾಳ್, ಬಸವಪುರ, ಕ್ಯಾದಿಗೆ ಹಾಳ್ ಕ್ರಾಸ್, ಗುಳೆಪ್ಪ ಮಠ. ಎಫ್-9 ಬಾದನಹಟ್ಟಿ ಎನ್.ಜೆ.ವೈ ಮಾರ್ಗದ ಬಾದನಹಟ್ಟಿ, ವದ್ದಟ್ಟಿ, ಕ್ರಾಸ್ ಗಂಗಾಭವಾನಿಕ್ಯಾAಪ್, ಸಪ್ತಗಿರಿಕ್ಯಾಂಪ್, ರ‍್ರಂಗಳಿ, ಕೃಷ್ಣನಗರ ಕ್ಯಾಂಪ್, ರಾಮಬಾಬು ಕ್ಯಾಂಫ್, ಅನ್ನಪೂರ್ಣೇಶ್ವರಿ ಕ್ಯಾಂಪ್, ರ‍್ರಿಂಗಳಿ, ಮಾರುತಿ ಕ್ಯಾಂಪ್. ಎಫ್-15 ಸೋಲಾರ್ ಫೀಡರ್ ಸೇರಿ ಇನ್ನೂ ಮುಂತಾದ ಕಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಬೆಂಬಲ ಯೋಜನೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ ಚಿತ್ರದುರ್ಗ, ಬಳ್ಳಾರಿಯ ವಿಭಾಗೀಯ ಕಚೇರಿ ವತಿಯಿಂದ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‌ಗೆ ರೂ.7,280 ರಂತೆ ರೈತರಿಂದ ಖರೀದಿಸಲಾಗವುದು.
ಈಗಾಗಲೇ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧ ಸ್ಧಳಗಳಲ್ಲಿ ಪ್ರಾರಂಭಿಸಲಾಗಿದೆ.
*ಖರೀದಿ ಕೇಂದ್ರಗಳ ವಿವರ:*
ಬಳ್ಳಾರಿಯ ಎಪಿಎಂಸಿ ಯಾರ್ಡ್ನ ಎಪಿಎಂಸಿ ಆಡಳಿತ ಕಚೇರಿಯ ನಟರಾಜ ಹೊಸಮನಿ ಅವರ ಮೊ.9686513163 ಮತ್ತು ಶಿವಮೂರ್ತಿ.ಡಿ.ಹೆಚ್ ಅವರ ಮೊ.8722047273.
ಬಳ್ಳಾರಿ ತಾಲ್ಲೂಕಿನ ಕಪ್ಪಗಲ್ಲು ಗ್ರಾಮದ ಮಠದ ರಸ್ತೆಯ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತದ ಕಾರ್ಯದರ್ಶಿ ಈರೇಶ ಅವರ ಮೊ.7353155205. ಖರೀದಿ ಏಜೆನ್ಸಿಯು ಕೆಒಎಫ್ ಬಳ್ಳಾರಿ ಆಗಿರುತ್ತದೆ.
*ಬೇಕಾದ ದಾಖಲೆಗಳು:*
2024-25 ನೇ ಸಾಲಿನ ಪಹಣಿ ಪತ್ರ. ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್‌ಐಡಿ ಪಡೆಯುವುದು ಕಡ್ಡಾಯ. ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ನಲ್ಲಿ ಯಾವುದಾದರು ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು.
ಆಧಾರ್ ಕಾರ್ಡ್, ಬ್ಯಾಂಕ್ ಖಾತೆ (ಆಧಾರದ ಕಾರ್ಡ್ನೊಂದಿಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ. ಒಣಗಿದ ಹಾಗೂ ಸ್ವಚ್ಛ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟಕ್ಕೆ ತರುವುದು. ಸೂರ್ಯಕಾಂತಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ಆ.24 ರಿಂದ 45 ದಿನಗಳೊಳಗೆ ನೋಂದಣಿ ಮಾಡಿಸಿ, ನೋಂದಣಿ ಚೀಟಿ ಪಡೆಯಬೇಕು.
ನಿಗಧಿತ ಅವಧಿಯೊಳಗೆ ನೋಂದಣಿಗೊAಡ ರೈತರಿಂದ ಪ್ರತಿ ಎಕರೆಗೆ 03 (ಮೂರು) ಕ್ವಿಂಟಾಲ್ ಗರಿಷ್ಠ 15 (ಹದಿನೈದು) ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಸೂರ್ಯಕಾಂತಿ ಉತ್ಪನ್ನವನ್ನು 90 ದಿನಗಳವರೆಗೆ ಖರೀದಿಸಲಾಗುವುದು. ಬೆಳಿಗ್ಗೆ 09 ಗಂಟೆಯಿAದ ಸಾಯಂಕಾಲ 05 ಗಂಟೆಯವರೆಗೆ ಮಾತ್ರ ಖರೀದಿಸಲಾಗುವುದು.
ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು. ನಿಗದಿತ ಸಾಮಾಜಿಕ ಅಂತರ ಮತ್ತು ನೈರ್ಮಲ್ಯ ಕಾಪಾಡುವುದು ಹಾಗೂ ವೈರಾಣು ಹರಡುವಿಕೆ ತಡೆಗಟ್ಟುವ ಬಗ್ಗೆ ಕೇಂದ್ರ/ರಾಜ್ಯ ಸರ್ಕಾರವು ನೀಡಿರುವ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು.
ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಜಿಲ್ಲೆಯ ರೈತರು ಬೆಂಬಲ ಬೆಲೆ ಯೋಜನೆಯನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------------
ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಐದು ದಿನಗಳ “ರಾಜ್ಯ ಮಟ್ಟದ ಯುವಜನೋತ್ಸವ” ನಂದಿಹಳ್ಳಿಯ ಸ್ನಾತಕೋತ್ತರ ಕೇಂದ್ರದಲ್ಲಿ ಅಂತರಾಷ್ಟಿçÃಯ ಸ್ಪೋರ್ಟ್ಸ್ ಅಕಾಡೆಮಿ ಸ್ಥಾಪನೆ: ಕುಲಪತಿ ಪ್ರೊ.ಮುನಿರಾಜು
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ವಿಶ್ವವಿದ್ಯಾಲಯ ಕೇವಲ ಪಠ್ಯ ಚಟುವಟಿಕೆಗಳಿಗೆ ಸೀಮಿತವಾಗದಂತೆ, ಕ್ರೀಡಾ ಚಟುವಟಿಕೆಗಳಿಗೂ ಉತ್ತೇಜನ ನೀಡಲು ನಂದಿಹಳ್ಳಿಯ ಸ್ನಾತಕೋತ್ತರ ಕೇಂದ್ರದಲ್ಲಿ ಅಂತರಾಷ್ಟಿçÃಯ ಸ್ಪೋರ್ಟ್ಸ್ ಅಕಾಡೆಮಿ ಆರಂಭಿಸಲಾಗುವುದು ಎಂದು ಕುಲಪತಿ ಪ್ರೊ.ಎಂ.ಮುನಿರಾಜು ಅವರು ಹೇಳಿದರು.
ನಗರದ ಹೊರವಲಯದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮAದಿರದಲ್ಲಿ ರಾಷ್ಟಿçÃಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಐದು ದಿನಗಳ(27 ರಿಂದ 31ರ ವರೆಗೆ) “ರಾಜ್ಯ ಮಟ್ಟದ ಯುವಜನೋತ್ಸವ-2024” ಕಾರ್ಯಕ್ರಮವನ್ನು ಮಂಗಳವಾರ ವಿದ್ಯುಕ್ತವಾಗಿ ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಯೋಗ, ವ್ಯಾಯಾಮ ಮತ್ತು ರಾಷ್ಟಿçÃಯ ಸೇವಾ ಯೋಜನೆ ಚಟುವಟಿಕೆಗಳು ಸಹಕಾರಿಯಾಗಿವೆ. ಪ್ರತಿಯೊಬ್ಬ ವಿದ್ಯಾರ್ಥಿಯು ವಿವಿಯಲ್ಲಿ ಗಿಡ ನೆಟ್ಟು ಪೋಷಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ರಾಜ್ಯ ಎನ್‌ಎಸ್‌ಎಸ್ ಹಾಗೂ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಯುವಕರು ಭಾರತದ ಪ್ರೇರಕ ಶಕ್ತಿಯಾಗಿದ್ದಾರೆ. ಸಮಾಜಕ್ಕೆ ಜವಾಬ್ದಾರಿಯುತ ನಾಗರಿಕರನ್ನು ಕೊಡುಗೆ ನೀಡುವುದು ರಾಷ್ಟಿçÃಯ ಸೇವಾ ಯೋಜನೆಯ ಮುಖ್ಯ ಗುರಿಯಾಗಿದೆ ಎಂದು ತಿಳಿಸಿದರು.
ದೈಹಿಕ, ಮಾನಸಿಕ ಸದೃಢತೆ ವಿದ್ಯಾರ್ಥಿಗಳು ಕಲಿತುಕೊಂಡಲ್ಲಿ ಸಾಮಾಜಿಕ ಸದೃಢತೆ ತಾನಾಗಿಯೇ ನಿರ್ಮಾಣವಾಗುತ್ತದೆ. ಇದನ್ನು ಎನ್‌ಎಸ್‌ಎಸ್ ಶಿಬಿರಗಳು ಕಲಿಸಿಕೊಡುತ್ತವೆ. ದೇಶದಲ್ಲಿಯೇ ಹೆಚ್ಚು ಎನ್‌ಎಸ್‌ಎಸ್ ಸ್ವಯಂಸೇವಕರನ್ನು ಹೊಂದಿರುವ ರಾಜ್ಯ ನಮ್ಮದಾಗಿದೆ ಎಂದು ಹೇಳಿದರು.
ಕುಲಸಚಿವ ಎಸ್.ಎನ್.ರುದ್ರೇಶ್ ಅವರು ಮಾತನಾಡಿ, ರಾಷ್ಟಿçÃಯ ಸೇವಾ ಯೋಜನೆಯ ವಿದ್ಯಾರ್ಥಿಗಳ ಶ್ರಮದಾನ ಕಾರ್ಯದಿಂದ ಇಂದು ವಿಶ್ವವಿದ್ಯಾಲಯವು ಹಸಿರಿನಿಂದ ಕಂಗೊಳಿಸುತ್ತಿದೆ. ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಯೋಚನೆಗಳು ಮೂಡುವಂತೆ ಉತ್ತೇಜಿಸುತ್ತವೆ ಎಂದು ಹೇಳಿದರು.
ನಮ್ಮಲ್ಲಿರುವ ಹಲವಾರು ದೇಸಿ ಕಲೆಗಳನ್ನು ವಿದ್ಯಾರ್ಥಿಗಳಿಗೆ ಇಂದು ಪರಿಚಯಿಸಬೇಕಾಗಿದೆ. ಅದಕ್ಕಾಗಿಯೇ 5 ದಿನಗಳ ಯುವಜನೋತ್ಸವದಲ್ಲಿ ತೊಗಲುಗೊಂಬೆ ಆಟ, ಕೈಗೊಂಬೆ ಆಟ, ಜಾನಪದ ನಾಟಕ, ತಬಲಾ ಜುಗಲ್‌ಬಂದಿ ಕಾರ್ಯಕ್ರಮಗಳನ್ನು ಏರ್ಪಡಿಸಿದೆ ಎಂದು ತಿಳಿಸಿದರು.
ವಿವಿಯ ನಿಕಟಪೂರ್ವ ಕುಲಪತಿ ಪ್ರೊ.ಜೆ.ತಿಪ್ಪೇರುದ್ರಪ್ಪ ಅವರು ಮಾತನಾಡಿ, ರಾಷ್ಟಿçÃಯ ಸೇವಾ ಯೋಜನೆಯನ್ನು ವಿಶ್ವವಿದ್ಯಾಲಯದ ಪಠ್ಯಕ್ರಮದಲ್ಲಿ ಅಳವಡಿಸುವ ಮೂಲಕ ಎಲ್ಲ ವಿದ್ಯಾರ್ಥಿಗಳಿಗೂ ಇದರ ಮಹತ್ವವನ್ನು ತಿಳಿಸಿಕೊಡಬಹುದು ಎಂದು ಅವರು ಅಭಿಪ್ರಾಯ ಪಟ್ಟರು.
ಶಿಬಿರದಲ್ಲಿ ರಾಜ್ಯದ 21 ವಿಶ್ವವಿದ್ಯಾಲಯಗಳಿಂದ ಆಗಮಿಸಿರುವ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತಾದ ಜಪಾನ್ ಮಾದರಿಯ ಗೊಂಬೆ ನಾಟಕ ಜರುಗಿತು.
ವಿಶ್ವವಿದ್ಯಾಲಯದ ರಾಷ್ಟಿçÃಯ ಸೇವಾಯೋಜನೆಯ ಸಂಯೋಜನಾಧಿಕಾರಿಗಳಾದ ಡಾ.ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಡಾ.ಶಶಿಧರ ಕೆಲ್ಲೂರ ನಿರೂಪಿಸಿದರು. ಡಾ.ನಾಗರಾಜ ದಂಡೊತಿ ವಂದಿಸಿದರು.
ಈ ಸಂದರ್ಭದಲ್ಲಿ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
---------
ಲಿಡ್‌ಕರ್; ಚರ್ಮವಸ್ತುಗಳಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಗೌರಿ ಗಣೇಶ ಹಬ್ಬದ ಪ್ರಯುಕ್ತ ಆಗಸ್ಟ್ 28 ರಿಂದ ಸೆಪ್ಟೆಂಬರ್ 9 ರವರೆಗೆ (10 ದಿನಗಳವರೆಗೆ) ಎಲ್ಲಾ ಚರ್ಮವಸ್ತುಗಳನ್ನು ಶೇ.20 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು ಲಿಡ್‌ಕರ್ ಜಿಲ್ಲಾ ಸಂಯೋಜಕ ಟಿ.ಸಂಜೀವಪ್ಪ ಅವರು ತಿಳಿಸಿದ್ದಾರೆ.
ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬುಡಾ ಕಾಂಪ್ಲೆಕ್ಸ್ನ ಶಾಪ್ ನಂ:24 ರ ಲಿಡ್‌ಕರ್ ಲೆದರ್ ಎಂಪೋರಿಯಮ್ ಮಳಿಗೆಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಹಾಗೂ ಮಧ್ಯಾಹ್ನ 4 ರಿಂದ ಸಂಜೆ 8 ರವರೆಗೆ ಮಾರಾಟ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊ.9844667691, 8660667128 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ 7ಸಂಪರ್ಕಿಸಬಹುದಾಗಿದೆ.
-----------
ಬಳ್ಳಾರಿ ಮಹಾನಗರ ಪಾಲಿಕೆ; ವಾರ್ಡ್ ಸಮಿತಿ ಸದಸ್ಯರ ಆಯ್ಕೆಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆಯ ಪ್ರತಿಯೊಂದು ವಾರ್ಡ್ಗಳಿಗೆ (ಒಟ್ಟು 39 ವಾರ್ಡ್ಗಳಿಗೆ) ವಾರ್ಡ್ ಸಮಿತಿ ರಚಿಸುವ ಕುರಿತು ಆಸಕ್ತ ಸಂಘ ಸಂಸ್ಥೆಗಳ ಪ್ರತಿನಿದಿ ಮತ್ತು ಸಾರ್ವಜನಿಕರಿಂದÀ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
39 ವಾರ್ಡ್ಗಳಿಗೆ ಪೂರ್ಣ ಪ್ರಮಾಣದಲ್ಲಿ ಅರ್ಜಿಗಳು ಸ್ವೀಕೃತವಾಗದೆ ಇರುವುದರಿಂದ, ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿ, ಪುನ: ಅರ್ಜಿ ಆಹ್ವಾನಿಸಲಾಗಿದೆ. ವಾರ್ಡ್ ಸಮಿತಿ ಸದಸ್ಯರನ್ನಾಗಿ ಆಯ್ಕೆಯಾಗಲು ಆಸಕ್ತ ಸಂಘ ಸಂಸ್ಥೆಯ ಪ್ರತಿನಿಧಿ ಮತ್ತು ಸಾರ್ವಜನಿಕರು ಪಾಲಿಕೆಯ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಸೂಚನಾ ಫಲಕಕ್ಕೆ ಪ್ರಕಟಿಸಿದ ವಾರ್ಡ್ ಸಮಿತಿ ಸದಸ್ಯರ ಆಯ್ಕೆಯ ಪ್ರಕಟಣೆಯ ಷರತ್ತುಗಳ ಪ್ರಕಾರ ಸಂಬAಧಿಸಿದ ದಾಖಲೆಗಳೊಂದಿಗೆ ಸೆ.15 ರಂದು ಸಜೆ 05 ಗಂಟೆಯ ಅವಧಿಯೊಳಗೆ, ವಲಯ, ಗಾಂಧಿನಗರದಲ್ಲಿ, ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ವಲಯ ಕಚೇರಿ-1 ಅಥವಾ ವೆಬ್‌ಸೈಟ್ www.ballaricity.mrc.gov.in ನ್ನು ಸಂಪರ್ಕಿಸಬಹುದು ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.
-----------
ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ನಗರದ ರೈಲ್ವೆ ನಿಲ್ದಾಣ ಫ್ಲಾಟ್ ಫಾರಂ ಸಂಖ್ಯೆ ಒಂದರಲ್ಲಿ ಶೈಲೂ ಎನ್ನುವ 06 ವರ್ಷದ ಹೆಣ್ಣು ಮಗು ಜು.19 ರಂದು ಪತ್ತೆಯಾಗಿದ್ದು, ಹೆಣ್ಣುಮಗುವಿನ ಪೋಷÀಕರ ಪತ್ತೆಗೆ ಸಹಕರಿಸಬೇಕೆಂದು ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಮನವಿ ಮಾಡಿದ್ದಾರೆ.
*ಮಗುವಿನ ಚಹರೆ ವಿವರ:*
ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ.
ಹೆಣ್ಣು ಮಗುವಿನ ಪೋಷÀಕರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ರೈಲ್ವೇ ಪಿಎಸ್ ದೂ.08392-276063, ಮೊ.9480802131 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಅನಾಮಧೇಯ ಮೃತ ದೇಹ ಪತ್ತೆ; ವಾರಸುದಾರರ ಪತ್ತೆಗೆ ಮನವಿ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ತೋರಣಗಲ್ಲಿನ ಹಳೆಯ ಚಿತ್ರಮಂದಿರದ ಗೋಡೆಯ ಬಳಿ ಅಂದಾಜು 55-60 ವರ್ಷದ ಅನಾಮಧೇಯ ಭಿಕ್ಷÄಕ ವ್ಯಕ್ತಿಯು ಏ.04 ರಂದು ದೈಹಿಕ ಕ್ಷೀಣತೆಯಿಂದ ಮೃತ ಪಟ್ಟಿದ್ದು, ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ತೋರಣಗಲ್ಲು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಫ್ ಪೊಲೀಸ್ ತಿಳಿಸಿದ್ದಾರೆ.
ಮೃತನ ಚಹರೆ:
ಎತ್ತರ 5.2 ಗೋಧಿ ಮೈಬಣ್ಣ, ಕೋಲು ಮುಖ ಹೊಂದಿರುತ್ತಾನೆ. ತಲೆಯ ನೆತ್ತಿಯ ಕೂದಲು ಉದುರಿದ್ದು, ಮೃತನ ದೇಹದ ಮೇಲೆ ನೀಲಿ ಮತ್ತು ಬಿಳಿ ಗೆರೆಯುಳ್ಳ ಅರ್ಧ ತೋಳಿನ ಟೀ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಇರುತ್ತದೆ.
ಈ ಮೇಲ್ಕಂಡ ಚಹರೆ ಗುರುತುಳ್ಳ ಮೃತನ ವಾರಸುದಾರರ ಬಗ್ಗೆ ಮಾಹಿತಿ ದೊರೆತಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ಪಿಎಸ್‌ಐ ಮೊ:9480803062 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ; ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಪಿಯುಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ದ ಮತ್ತು ಪಾರ್ಸಿ) ಶುಲ್ಕ ಮರುಪಾವತಿ ಯೋಜನೆಯಡಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಮೆಟ್ರಿಕ್ ನಂತರ ಮತ್ತು ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆನ್‌ಲೈನ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (ಎಸ್‌ಎಸ್‌ಪಿ ಪೋರ್ಟಲ್) https://ssp.karnatka.go.in/ ಜಾಲತಾಣಕ್ಕೆ ಭೇಟಿ ನೀಡಬೇಕು.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಅರ್ಹತೆ: ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ದ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ಮೆಟ್ರಿಕ್ ನಂತರದ ಕೋರ್ಸುಗಳ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2 ಲಕ್ಷ ಮೀರಿರಬಾರದು ಮತ್ತು ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2.5 ಲಕ್ಷ ಮೀರಿರಬಾರದು.
ಶುಲ್ಕ ಮರುಪಾವತಿ ಯೋಜನೆಯ ಪ್ರಯೋಜನೆ ಪಡೆಯಲು ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಹಿಂದೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಶುಲ್ಕ ಮರುಪಾವತಿ ಯೋಜನೆಯ ಪ್ರಕಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರ ಆದೇಶಗಳು ಹಾಗೂ ಮಾರ್ಗಸೂಚನೆಗಳಿಗೆ ಒಳಪಟ್ಟಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಾಹಿತಿ ಕೇಂದ್ರಗಳ ದೂ. ಬಳ್ಳಾರಿ-08392-245755, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಆ.29 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಆ.28(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಗೆ ಬರುವ ಎಫ್-2 ರ ಕಬ್ಬಿಣದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುರಿಂದÀ ಆ.29 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 5 ಗಂಟೆಯವರೆಗೆ ನಗರ ಪ್ರದೇಶಗಳಾದ ಗಾಂಧಿನಗರ, ಬಿ.ಎಸ್.ಕಾಂಪೌAಡ್, ರ‍್ರಿತಾತ ನಗರ, ಸೆಂಟ್ರಲ್ ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿAಗಣ್ಣ ಕಾಲೋನಿ, ರೈಲ್ವೆ ಸ್ಟೇ಼ಷನ್, ಎಸ್.ಪಿ. ಬಂಗ್ಲೆ, ಮಹಿಳಾ ಕಾಲೇಜು ರಸ್ತೆ, ಸೂರ್ಯಕಾಲೋನಿ ಸೇರಿದಂತೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಮಂಗಳವಾರ, ಆಗಸ್ಟ್ 27, 2024
ಗ್ಯಾರಂಟಿ ಯೋಜನೆಗಳನ್ನು ಸಮರ್ಪಕ ಮತ್ತು ಪ್ರಾಮಾಣಿಕವಾಗಿ ಅನುಷ್ಠಾನಗೊಳಿಸಲು ಶ್ರಮವಹಿಸಿ; ಎಸ್.ಆರ್ ಮೆಹರೋಜ್ ಖಾನ್
ಬಳ್ಳಾರಿ,ಆ.27(ಕರ್ನಾಟಕ ವಾರ್ತೆ):
ಜನ ಸಾಮಾನ್ಯರ ಏಳಿಗೆಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹತ್ತರವಾದ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಲಬುರಗಿ ವಿಭಾಗದ ಉಪಾಧ್ಯಕ್ಷರಾದ ಎಸ್.ಆರ್ ಮೆಹರೋಜ್ ಖಾನ್ ತಿಳಿಸಿದರು.
ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳ ಪರವಾಗಿ ರಾಜ್ಯಾದ್ಯಂತ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು, ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ವಿದ್ಯಾರ್ಥಿಗಳಿಗೆ ಗೃಹಿಣಿಯರಿಗೆ, ವಿದ್ಯುತ್ ಗ್ರಾಹಕರಿಗೆ ಹಾಗೂ ಯುವಕರಿಗೆ ಸೇರಿದಂತೆ ಸಮಾಜದ ಪ್ರತಿಯೊಬ್ಬರಿಗೂ ಅನುಕೂಲವಾಗುತ್ತಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಯು ಪಕ್ಷಾತೀತವಾದ ಹಾಗೂ ಜನಪರವುಳ್ಳ ಸಾಮಾಜಿಕ ಕಾರ್ಯಕ್ರಮವಾಗಿದ್ದು, ಅರ್ಹ ಸಾರ್ವಜನಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಇದರ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಾಮಾಜಿಕ ಕಳಕಳಿ ಹೊಂದಿರುವ ಐದು ಗ್ಯಾರಂಟಿ ಯೋಜನೆಗಳು ಜಿಲ್ಲೆಯಾದ್ಯಂತ ಶೇ.95 ರಷ್ಟು ಅನುಷ್ಠಾನಗೊಂಡಿದ್ದು, ಫಲಾನುಭವಿಗಳು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಎನ್ನುವುದು ಸಂತಸಕರ ವಿಷಯವಾಗಿದೆ. ಮುಂದಿನ ದಿನಮಾನಗಳಲ್ಲಿ ಶೇ.100 ರಷ್ಟು ಅನುಷ್ಠಾನಗೊಳಿಸಲು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಕೆಲ ತಾಂತ್ರಿಕ ಲೋಪದೋಷದಿಂದ ಸಕಾಲಕ್ಕೆ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಲು ವಿಳಂಬವಾಗುತ್ತಿದೆಯೇ ಹೊರತು ಯಾವುದೇ ಕಾರಣಕ್ಕೂ ನಿಲ್ಲಿಸಲಾಗುವುದಿಲ್ಲ. ಯೋಜನೆಗಳ ಅನುಷ್ಠಾನಕ್ಕೆ ವಾರ್ಷಿಕ 53 ಸಾವಿರ ಕೋಟಿ ವಿನಿಯೋಗಿಸಲು ಅನುದಾನ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಒಟ್ಟು 3,01,180 ಪಡಿತರ ಚೀಟಿದಾರರಿದ್ದು ಗೃಹಲಕ್ಷಿö್ಮÃ ಯೋಜನೆಯಡಿ 2,77,494 ನೋಂದಣಿಯಾಗಿವೆ. ಈ ಪೈಕಿ 601 ಕೋಟಿ ರೂಪಾಯಿ ವೆಚ್ಚ ಭರಿಸಲಾಗಿದೆ ಎಂದು ಮಾಹಿತಿ ನೀಡಿದರು. ಗೃಹಲಕ್ಷಿö್ಮÃ ಯೋಜನೆಗೆ ಇನ್ನುಳಿದ ಅರ್ಹ ಪಡಿತರ ಚೀಟಿದಾರರು ಸಹ ನೋಂದಣಿ ಮಾಡಿಕೊಳ್ಳುವಂತೆ ಅರಿವು ಮೂಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.
ಶಕ್ತಿ ಯೋಜನೆಯಡಿ 2.94 ಕೋಟಿ ಫಲಾನುಭವಿಗಳು ಪ್ರಯಾಣಿಸಿದ್ದು, 110 ಕೋಟಿ ರೂ. ವೆಚ್ಚವಾಗಿದೆ ಎಂದರು. ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಸಮಸ್ಯೆಯಾಗದಂತೆ ಎಚ್ಚರವಹಿಸಲು ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.
ಜಿಲ್ಲೆಯಲ್ಲಿ 3,02,898 ಅರ್ಹ ವಿದ್ಯುತ್ ಬಳಕೆದಾರರಿದ್ದು ಗೃಹ ಜ್ಯೋತಿ ಯೋಜನೆಯಡಿ 2,74,775 ಗ್ರಾಹಕರು ನೋಂದಾಯಿಸಿಕೊAಡಿದ್ದು, 1.20 ಕೋಟಿ ವೆಚ್ಚ ವ್ಯಯವಾಗಿದೆ ಎಂದರು. ಯೋಜನೆಯಿಂದ ಹೊರಗುಳಿದ ಅರ್ಹ ವಿದ್ಯುತ್ ಗ್ರಾಹಕರಿಗೆ ಮನವೊಲಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸದರು.
ಅನ್ನಭಾಗ್ಯ ಯೋಜನೆಯಡಿ 31 ಲಕ್ಷ ಫಲಾನುಭವಿಗಳಿಗೆ 175 ಕೋಟಿ ವೆಚ್ಚ ಭರಿಸಲಾಗಿದೆ. ಗ್ರಾಹಕರಿಗೆ ಉತ್ತಮ ಗುಣ ಮಟ್ಟದ ಆಹಾರ ಪೂರೈಕೆಯಾಗುವಂತೆ ಜವಾಬ್ದಾರಿ ವಹಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.
ಯುವನಿಧಿ ಯೋಜನೆಯಡಿ 5,863 ಫಲಾನುಭವಿಗಳಿಗೆ 1 ಕೋಟಿ 76 ಲಕ್ಷ ಭರಿಸಲಾಗಿದೆ. ಅರ್ಹ ಯುವ ಸಮೂಹ ಹೆಚ್ಚಾಗಿ ನೋಂದಾಯಿಸಿಕೊಳ್ಳಲು ಅರಿವು ಮೂಡಿಸಬೇಕು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಅಧಿಕಾರಿಗಳಿಗೆ ಹೇಳಿದರು.
ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಮಾತನಾಡಿ, ಸರ್ಕಾರದ ಪ್ರತಿಷ್ಠಿತ ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರು ಸುಸ್ಥಿರವಾಗಿ ಜೀವನ ನಡೆಸುವುದ್ದಕ್ಕೆ ಸಹಕಾರಿಯಾಗಿದ್ದು, ಇದರಿಂದ ಮಹಿಳಾ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣವಾಗಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಿದಾನಂದಪ್ಪ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ತುಂಬಾ ಅನುಕೂಲವಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಸಂಬAಧಪಟ್ಟ ಇಲಾಖೆಗಳೊಂದಿಗೆ ಸಹಕಾರದಿಂದ ಕೆಲಸ ನಿರ್ವಹಿಸಲಾಗುವುದು ಎಂದು ತಿಳಿಸಿದರು.
*ಫಲಾನುಭವಿಗಳ ಅನಿಸಿಕೆ*:
ಗೃಹಲಕ್ಷಿö್ಮÃ ಹಣದಿಂದಾಗಿ ಮಕ್ಕಳ ಟ್ಯೂಷನ್, ಫೀಸ್, ರೇಷನ್ ಖರೀದಿ ಮತ್ತು ಸಂಸಾರ ನಿಭಾಯಿಸಲು ಸಹಾಯವಾಗಿದೆ. - ರಾಜೇಶ್ವರಿ, ಬಳ್ಳಾರಿ
ಬೆಂಗಳೂರಿನ ಕೋಚಿಂಗ್ ಸೆಂಟರ್‌ನಲ್ಲಿ ನನ್ನ ಮಗಳು (ವಿ.ವೆರೋಲಿಕಾ) ಕೆಎಎಸ್ ಪರೀಕ್ಷಾ ತರಬೇತಿ ನಡೆಸುತ್ತಿದ್ದು, ಊರಿಗೆ ಬಂದು ಹೋಗಲು ಮತ್ತು ನಾವು ಮಗಳನ್ನು ನೋಡಿಕೊಂಡು ಬರೋಕೆ ಹೋಗುವುದ್ದಕ್ಕೆ ಸರ್ಕಾರದ ಶಕ್ತಿ ಯೋಜನೆಯು ಉಪಯೋಗವಾಗಿದೆ - ರಾಣಿ, ಬಳ್ಳಾರಿ
ಸ್ಪರ್ಧಾತ್ಮಕ ಪರೀಕ್ಷೆಗಳ ಫೀಸ್ ತುಂಬಲು ಹಾಗೂ ಬ್ಯಾಚುಲರ್ ರೂಂನ ಬಾಡಿಗೆ ಕಟ್ಟಲು ಯುವನಿಧಿ ಹಣ ಉಪಯೋಗವಾಗುತ್ತಿದೆ. -ವೆಂಕಟೇಶ, ಸ್ನಾತ್ತಕೋತ್ತರ ಪದವೀಧರ
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ರಾಹುಲ್ ಶರಣಪ್ಪ ಸಂಕನೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪದಾಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.
--------
ಗ್ರಾಮ ಆರೋಗ್ಯ ಯೋಜನೆ ಮೂಲಕ ಗ್ರಾಮೀಣ ಜನರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡೋಣ: ರಾಹುಲ್ ಶರಣಪ್ಪ ಸಂಕನೂರ
ಬಳ್ಳಾರಿ,ಆ.27(ಕರ್ನಾಟಕ ವಾರ್ತೆ):
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳ ಮೂಲಕ ಪ್ರತಿ ಗ್ರಾಮಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಕ್ರಮಬದ್ಧವಾಗಿ ಆಯೋಜಿಸುವ ಮೂಲಕ ಜನಸಾಮಾನ್ಯರ ಸುಸ್ಥಿರ ಆರೋಗ್ಯ ಸುಧಾರಣಗೆ ಆದ್ಯತೆ ನೀಡೋಣ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ತಿಳಿಸಿದರು.
ಜಿಲ್ಲಾಡಳಿತ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆಯಡಿ ಮೈಸೂರಿನ ಅಬ್ದುಲ್ ನಜೀರಸಾಬ್ ರಾಜ್ಯ ಗ್ರಾಮೀಣಾಭಿವೃದ್ದಿ ಸಂಸ್ಥೆ ಸಂಯೋಗದೊAದಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ರಾಮ ಆರೋಗ್ಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಸಾಂಕ್ರಾಮಿಕ ರೋಗಗಳಾದ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಷಯರೋಗ, ಮಾನಸಿಕ ಆರೋಗ್ಯ, ಅಪೌಷ್ಟಿಕತೆ, ರಕ್ತಹೀನತೆ ಹಾಗೂ ಮುಟ್ಟಿನ ನೈರ್ಮಲ್ಯ ಮತ್ತು ಬಾಲ್ಯವಿವಾಹ ತಡೆಗಟ್ಟುವಿಕೆ ಮುಂತಾದ ಮಹತ್ವಪೂರ್ಣ ಅಂಶಗಳನ್ನು ಒಳಗೊಡಿದ್ದು, ರಾಜ್ಯ ಸರಕಾರದ ಆಶಯದಂತೆ ಸೂಕ್ತ ಆರೈಕೆ, ಚಿಕಿತ್ಸೆ ಅಗತ್ಯವಿರುವವರಿಗೆ ಮೇಲ್ಮಟ್ಟದ ಆಸ್ಪತ್ರೆಗೆ ಕಳುಹಿಸುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಿಸಲು ಪ್ರತಿಯೊಬ್ಬರೂ ಕೈಜೋಡಿಸೋಣ ಎಂದು ಹೇಳಿದರು.
ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಸಂಬAಧಿಸಿದ ಗ್ರಾಮ ಪಂಚಾಯತ ಅಡಿಯಲ್ಲಿ ಪ್ರತಿ ಗ್ರಾಮದಲ್ಲಿ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲು ಗ್ರಾಮ ಆರೋಗ್ಯ ಪಡೆಗಳ ಸದಸ್ಯರಾದ ಪಂಚಾಯತ್ ಸದಸ್ಯರು, ಪಂಚಾಯತ್ ವ್ಯಾಪ್ತಿಯಲ್ಲಿ ಇರುವ ಇತರ ಇಲಾಖೆಯ ಸಿಬ್ಬಂದಿಯವರಿಗೆ ಸೂಕ್ತ ತರಬೇತಿಯನ್ನು ನೀಡಬೇಕು ಎಂದು ಸೂಚಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನಾಗರಾಜ, ಮಂಜುನಾಥ್, ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಜಿಪಂನ ಉಪ ಕಾರ್ಯದರ್ಶಿ ಗಿರಿಜಾ ಶಂಕರ, ಜಿಪಂನ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಯೋಜನಾ ನಿರ್ದೇಶಕ ವಿನೋದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶ್ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ವಿಜಯ್ ಕುಮಾರ್ ಕೆ.ಹೆಚ್, ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ, ಡಾ.ಇಂದ್ರಾಣಿ.ವಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಡಾ.ಮರಿಯಂಬಿ.ವಿ.ಕೆ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಮನೋರೋಗ ತಜ್ಞ ಡಾ.ರೋಹನ್ ವನಗುಂದಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹಾಗೂ ಸಿಬ್ಬಂದಿಯವರು ಭಾಗವಹಿಸಿದ್ದರು.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)





































