ಬುಧವಾರ, ಆಗಸ್ಟ್ 21, 2024
ಸೆ.04 ರಂದು ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ
ಬಳ್ಳಾರಿ,ಆ.21(ಕರ್ನಾಟಕ ವಾರ್ತೆ):
ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಮಿತಿಯ ಮೊದಲನೇ ತ್ರೆöÊಮಾಸಿಕ ಸಭೆಯನ್ನು ಸೆ.04ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್‌ನ ನಜೀರ್‌ಸಾಬ್ ಸಭಾಂಗಣದಲ್ಲಿ ನಡೆಸಲು ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಂ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಗೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ