ಶುಕ್ರವಾರ, ಆಗಸ್ಟ್ 2, 2024

ಆ.05 ರಂದು ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಭೆ

ಬಳ್ಳಾರಿ,ಆ.02(ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಆ.05 ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವಿಜಯ್ ಕುಮಾರ್ ಕೆ.ಹೆಚ್ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ