ಬುಧವಾರ, ಆಗಸ್ಟ್ 7, 2024
ಹೆಚ್‌ಟಿ, ಇಹೆಚ್‌ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಆ.08 ರಂದು
ಬಳ್ಳಾರಿ,ಆ.07(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪವಿಭಾಗ-1 ಮತ್ತು 2 ರ ವ್ಯಾಪ್ತಿಗೆ ಹೆಚ್‌ಟಿ ಮತ್ತು ಇಹೆಚ್‌ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಜೆಸ್ಕಾಂನ ಕಾರ್ಯ ಮತ್ತು ಪಾಲನೆ ವಲಯ ಮುಖ್ಯ ಅಭಿಯಂತರರ ಅಧ್ಯಕ್ಷತೆಯಲ್ಲಿ ಆ.08 ರಂದು ಬೆಳಿಗ್ಗೆ 11 ಗಂಟೆಗೆ ಮೋತಿ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್ ಹಿಂಭಾಗದ ವಲಯ ಕಚೇರಿಯ ಮೊದಲ ಮಹಡಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಹೆಚ್‌ಟಿ ಮತ್ತು ಇಹೆಚ್‌ಟಿ ವಿದ್ಯುತ್ ಗ್ರಾಹಕರು ಸಭೆಗೆ ಭಾಗವಹಿಸಬೇಕು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರÀ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಇ.ಟಿ.ಲಕ್ಷಿö್ಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ