ಮಂಗಳವಾರ, ಆಗಸ್ಟ್ 6, 2024
ಆ.08 ರಂದು ಹೆಚ್‌ಟಿ, ಇಹೆಚ್‌ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ
ಬಳ್ಳಾರಿ,ಆ.06(ಕರ್ನಾಟಕ ವಾರ್ತೆ):
ಜಿಲ್ಲೆಯ ಹೆಚ್‌ಟಿ ಮತ್ತು ಇಹೆಚ್‌ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಜೆಸ್ಕಾಂನ ಕಾರ್ಯ ಮತ್ತು ಪಾಲನೆ ವಲಯ ಮುಖ್ಯ ಅಭಿಯಂತರರ ಅಧ್ಯಕ್ಷತೆಯಲ್ಲಿ ಆ.08 ರಂದು ಬೆಳಿಗ್ಗೆ 11 ಗಂಟೆಗೆ ವಲಯ ಕಚೇರಿಯ ಮೊದಲ ಮಹಡಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜೆಸ್ಕಾಂನ ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ಜೆಸ್ಕಾಂ ವಿಭಾಗ ವ್ಯಾಪ್ತಿಯ ಬಳ್ಳಾರಿ ನಗರ, ಬಳ್ಳಾರಿ ಗ್ರಾಮೀಣ, ಸಿರುಗುಪ್ಪ, ಸಂಡೂರು ನಗರ, ಉಪವಿಭಾಗ 1 ಮತ್ತು 2 ರಲ್ಲಿ ಒಳಪಡುವ ಹೆಚ್‌ಟಿ ಮತ್ತು ಇಹೆಚ್‌ಟಿ ವಿದ್ಯುತ್ ಗ್ರಾಹಕರು ಭಾಗವಹಿಸಿ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ