ಬುಧವಾರ, ಆಗಸ್ಟ್ 7, 2024

ಆ.08 ರಂದು ಹೆಚ್‌ಟಿ, ಇಹೆಚ್‌ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ಆ.07(ಕರ್ನಾಟಕ ವಾರ್ತೆ): ಗ್ರಾಮೀಣ ಜೆಸ್ಕಾಂ ವ್ಯಾಪ್ತಿಗೆ ಬರುವ ಬಳ್ಳಾರಿ ಗ್ರಾಮೀಣ, ಕುರುಗೋಡು, ಸಂಡೂರು, ಮತ್ತು ಸಿರುಗುಪ್ಪ ತಾಲ್ಲೂಕುಗಳ ಹೆಚ್‌ಟಿ ಮತ್ತು ಇಹೆಚ್‌ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಜೆಸ್ಕಾಂನ ಕಾರ್ಯ ಮತ್ತು ಪಾಲನೆ ವಲಯ ಮುಖ್ಯ ಅಭಿಯಂತರರ ಅಧ್ಯಕ್ಷತೆಯಲ್ಲಿ ಆ.08 ರಂದು ಬೆಳಿಗ್ಗೆ 11 ಗಂಟೆಗೆ ಮೋತಿ ವೃತ್ತದ ಬಳಿಯ ಬುಡಾ ಕಾಂಪ್ಲೆಕ್ಸ್ ಹಿಂಭಾಗದ ವಲಯ ಕಚೇರಿಯ ಮೊದಲ ಮಹಡಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. -----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ