ಬುಧವಾರ, ಆಗಸ್ಟ್ 7, 2024
ಆ.09 ರಂದು ವಿವಿಧ ಮಹನೀಯರ ಜಯಂತಿಯ ಪೂರ್ವಭಾವಿ ಸಭೆ
ಬಳ್ಳಾರಿ,ಆ.07(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.19 ರಂದು ನುಲಿಯ ಚಂದಯ್ಯ ಜಯಂತಿ, ಆ.20 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಆ.26 ರಂದು ಶ್ರೀಕೃಷ್ಣ ಜಯಂತಿ ಆಚರಣೆ ಕುರಿತು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರ ಅಧ್ಯಕ್ಷತೆಯಲ್ಲಿ ಆ.09 ರಂದು ಬೆಳಿಗ್ಗೆ 11.30 ಗಂಟೆಗೆ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ