ಬುಧವಾರ, ಆಗಸ್ಟ್ 7, 2024

ಆ.09 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಆ.07(ಕರ್ನಾಟಕ ವಾರ್ತೆ): ಗ್ರಾಮೀಣ ಜೆಸ್ಕಾಂನ 220/110/11 ಕೆ.ವಿ ಅಲ್ಲೀಪುರ ಸ್ವೀಕರಣಾ ಕೇಂದ್ರದ 20 ಎಂವಿಎ ಪರಿವರ್ತಕ-2ರ ಆಯಿಲ್ ಸೋರಿಕೆಯ ತಡೆಗಟ್ಟುವ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಆ.09 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನಬಾಬು ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* ಎಫ್-31 ಕೊಳಗಲ್ಲು ಮಾರ್ಗದ ಕೊಳಗಲ್ಲು, ಕೃಷ್ಣನಗರ ಕ್ಯಾಂಪ್, ಎಫ್-32 ಐ.ಪಿ ಸೆಟ್ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಅಲ್ಲೀಪುರ, ಆಲದಹಳ್ಳಿ, ಐ.ಪಿ ಸೆಟ್‌ಗಳು. ಎಫ್-38 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ ಮತ್ತು ಎಫ್-71 ಹರಗಿನದೋಣಿ ಎನ್‌ಜೆವೈ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಹೊನ್ನಳ್ಳಿ, ಹೊನ್ನಳ್ಳಿ ತಾಂಡ ಮುಂತಾದ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ