ಶನಿವಾರ, ಆಗಸ್ಟ್ 17, 2024
ಆ.20 ರಂದು ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಸಮಾರಂಭ
ಬಳ್ಳಾರಿ,ಆ.17(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆಯ ಸಮಾರಂಭವನ್ನು ಆ.20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ನಲ್ಲಚೆರವು ಪ್ರದೇಶದ ಜಿಲ್ಲಾ ಕ್ರೀಡಾಂಗಣ ರಸ್ತೆಯ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗಿದೆ.
ವಸತಿ, ವಕ್ಘ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ಎಂ.ನಾಗರಾಜ, ನಾರಾ ಭರತ್‌ರೆಡ್ಡಿ, ವಿಧಾನ ಪರಿಷತ್ ಶಾಸಕರಾದ ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳು ಭಾಗವಹಿಸವರು.
ಕೊಟ್ಟೂರುಸ್ವಾಮಿ ಶಿಕ್ಷಣ ಮಹಾವಿದ್ಯಾಲಯ ಸಹ ಪ್ರಾಧ್ಯಾಪಕ ಡಾ.ಸುರೇಶ್ ಬಾಬು ಅವರು ಡಿ.ದೇವರಾಜ ಅರಸು ಕುರಿತು ವಿಶೇಷ ಉಪನ್ಯಾಸ ನೀಡುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಸೇರಿದಂತೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಹಿಂದುಳಿದ ವರ್ಗಗಳ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಇಲಾಖೆಯ ನೌಕರರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ತಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ