ಗುರುವಾರ, ಆಗಸ್ಟ್ 1, 2024

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಆದೇಶ

ಬಳ್ಳಾರಿ,ಆ.01(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿAದ ಆ.04 ರಿಂದ 13 ರವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷಾ ಕೇಂದ್ರ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ಸಿ.ಆರ್.ಪಿ.ಸಿ ಕಲಂ 144 ರ ಮೇರೆಗೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಇಂಟರ್‌ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಆದೇಶವು ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ