ಬುಧವಾರ, ಆಗಸ್ಟ್ 21, 2024
ಆ.22 ರಂದು ರಾಷ್ಟಿçÃಯ ಬಾಹ್ಯಾಕಾಶ ದಿನ
ಬಳ್ಳಾರಿ,ಆ.21(ಕರ್ನಾಟಕ ವಾರ್ತೆ):
ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ವೀರಶೈವ ಮಹಾವಿದ್ಯಾಲಯ ವಿವಿ ಸಂಘದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ವೀರಶೈವ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯಲ್ಲಿ ರಾಷ್ಟಿçÃಯ ಬಾಹ್ಯಾಕಾಶ ದಿನ ಕಾರ್ಯಕ್ರಮವನ್ನು ಆ.22 ರಂದು ಬೆಳಿಗ್ಗೆ 10.30 ಗಂಟೆಗೆ ವೀರಶೈವ ಮಹಾವಿದ್ಯಾಲಯದ ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದೆ.
ಪಿಎಂ ಸೂರ್ಯ ಘರ್ ಯೋಜನೆ, ವಿಕಸಿತ ಭಾರತ ಬಜೆಟ್, ಹೊಸ ಕ್ರಿಮಿನಲ್ ಕಾನೂನುಗಳು ಹಾಗೂ ಪಿಎಂ ದೂರದರ್ಶಿತ್ವ-2047, ಛಾಯಾಚಿತ್ರ ಪ್ರದರ್ಶನ ಹಾಗೂ ವಿಶೇಷ ಜಾಗೃತಿ ಕಾರ್ಯಕ್ರಮ ಇರಲಿದೆ.
ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆ ಮಾಡುವರು.
ಮಹಾನಗರ ಪಾಲಿಕೆಯ ಮಾಜಿ ಮೇಯರ್ ಮತ್ತು ಹಾಲಿ ಸದಸ್ಯೆ ರಾಜೇಶ್ವರಿ ಸುಬ್ಬರಾಯುಡು ಅವರು ಕಾರ್ಯಕ್ರಮ ಉದ್ಘಾಟಿಸುವರು.
ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ದರೂರು ಶಾಂತಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ನಿಷ್ಠಿ ರುದ್ರಪ್ಪ, ವೀರಶೈವ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಜಿ.ಮನೋಹರ್, ವೀರಶೈವ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪಿ.ಎಸ್.ಗೌತಮ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಬಳ್ಳಾರಿಯ ಕಿಷ್ಕಿಂದ ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ನಾವೀನ್ಯ ವಿಭಾಗದ ಡೀನ್ ಪ್ರೊ.ಮಂಜುನಾಥ್.ಎಸ್ ಮತ್ತು ದೂರದರ್ಶನ ಕೇಂದ್ರದ ನಿವೃತ್ತ ಉಪನಿರ್ದೇಶಕ ಡಾ.ಸುಧಾಕರ್ ಅವರು ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಜಾಗೃತಿ ಜಾಥಾ, ಛಾಯಾಚಿತ್ರ ಪ್ರದರ್ಶನ, ವಿಶೇಷ ಉಪನ್ಯಾಸ, ಚಿತ್ರಕಲೆ, ರಂಗೋಲಿ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೇಂದ್ರ ಮತ್ತು ಸಂವಹನ ಇಲಾಖೆಯ ಬಳ್ಳಾರಿ ಮತ್ತು ಶಿವಮೊಗ್ಗ ವಿಭಾಗದ ಕ್ಷೇತ್ರ ಪ್ರಚಾರ ಅಧಿಕಾರಿ ಹಾಗೂ ನೋಡಲ್ ಅಧಿಕಾರಿಯಾದ ಅಕ್ಷತಾ ಸಿ.ಹೆಚ್ ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ