ಬುಧವಾರ, ಆಗಸ್ಟ್ 21, 2024

ಆ.23 ರಂದು ರಾಷ್ಟಿçÃಯ ಬಾಹ್ಯಾಕಾಶ ದಿನ

ಬಳ್ಳಾರಿ,ಆ.21(ಕರ್ನಾಟಕ ವಾರ್ತೆ): ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಭಾರತೀಯ ವಿಜ್ಞಾನ ಸಂಸ್ಥೆ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದೊಂದಿಗೆ ರಾಷ್ಟಿçÃಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮವನ್ನು ಆ.23 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೋಟೆ ಪ್ರದೇಶದ ಜಿಪಂ ನಜೀರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಕಾರ್ಯಕ್ರಮ ಉದ್ಘಾಟಿಸುವರು ಮತ್ತು ಅಧ್ಯಕ್ಷತೆ ವಹಿಸುವರು. ಇಸ್ರೋ ವಿಜ್ಞಾನಿ ವಿ.ಚಂದ್ರಬಾಬು ಅವರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು. ಜಿಪಂ ಉಪ ಕಾರ್ಯದರ್ಶಿ ಗಿರಿಜಾ ಶಂಕರ್, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಎಸ್.ಎಂ., ಬಳ್ಳಾರಿ ಎನ್‌ಐಸಿ ಕೇಂದ್ರದ ತಾಂತ್ರಿಕ ನಿರ್ದೇಶಕ ಶಿವಪ್ರಸಾದ್ ವಸ್ತçದ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಬಿ.ಉಮಾದೇವಿ, ಕಾರ್ಯಕ್ರಮ ಸಂಯೋಜಕ ರಾಮಚಂದ್ರ ರೆಡ್ಡಿ ಜಿ.ಬಿ ಸೇರಿದಂತೆ ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ