ಗುರುವಾರ, ಆಗಸ್ಟ್ 22, 2024

ಆ.26 ರಂದು ಶ್ರೀ ಕೃಷ್ಣ ಜಯಂತ್ಯೋತ್ಸವ

ಬಳ್ಳಾರಿ,ಆ.22(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಕೃಷ್ಣ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆ.26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರಲ್ಲಿ ಏರ್ಪಡಿಸಲಾಗಿದೆ. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜಡ್ ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಬಳ್ಳಾರಿ ಮಹಾನಗರ ಪಾಲಿಕೆಯ ಸಭಾನಾಯಕರು ಹಾಗೂ ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಪಿ.ಗಾದೆಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಎಸ್‌ಜಿಟಿ ಪಿಯು ಕಾಲೇಜಿನ ಕನ್ನಡ ಉಪನ್ಯಾಸಕರಾದ ಅಮಾತಿ ಬಸವರಾಜ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಬಳ್ಳಾರಿಯ ಲಕ್ಷಿö್ಮÃ ಕಲಾಕ್ಷೇತ್ರ ತಂಡದಿAದ ಸಮೂಹ ನೃತ್ಯ ಕಾರ್ಯಕ್ರಮ ಇರಲಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು. *ಮೆರವಣಿಗೆ:* ಜಯಂತಿಯ ಅಂಗವಾಗಿ ಅಂದು ಬೆಳಿಗ್ಗೆ 09 ಗಂಟೆಗೆ ಮಹಾನಗರ ಪಾಲಿಕೆ ಕಚೇರಿ ಮುಂಭಾಗದಿAದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತ, ಸ್ಟೇಷನ್ ರಸ್ತೆ, ಹೆಚ್.ಆರ್.ಗವಿಯಪ್ಪ ವೃತ್ತದಿಂದ ಜೋಳದರಾಶಿ ದೊಡ್ಡನಗೌಡ ರಂಗಮAದಿರದ ವೇದಿಕೆ ಕಾರ್ಯಕ್ರಮದವರೆಗೆ ಸಾಗಿ ಬರಲಿದೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ