ಮಂಗಳವಾರ, ಆಗಸ್ಟ್ 20, 2024

ಎನ್‌ಎಂಎAಎಸ್ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಬಳ್ಳಾರಿ,ಆ.20(ಕರ್ನಾಟಕ ವಾರ್ತೆ): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನವದೆಹಲಿ ರವರ ಮಾರ್ಗಸೂಚಿಯಂತೆ ಎನ್‌ಎಂಎAಎಸ್ ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್‌ಕ್ಯುಎಎಸಿ ವತಿಯಿಂದ ನಡೆಸಲು ಆನ್‌ಲೈನ್ ಮೂಲಕ ಅರ್ಜಿ ಎನ್‌ಎಂಎAಎಸ್ ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಯ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಪರೀಕ್ಷೆಯ ಆನ್‌ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ https://kseab.karnataka.gov.in/ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಎನ್‌ಎಂಎAಎಸ್ ಲಾಗಿನ್‌ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‌ಸೈಟ್‌ನಲ್ಲಿನ ಸುತ್ತೋಲೆ ನೋಡಬಹುದು ಹಾಗೂ ಕೆಎಸ್‌ಕ್ಯುಎಎಸಿ ಕಚೇರಿಯ ದೂ.080-23341615 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ