ಗುರುವಾರ, ಆಗಸ್ಟ್ 1, 2024

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಅರ್ಜಿ ಆಹ್ವಾನ

ಬಳ್ಳಾರಿ,ಆ.01(ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಜಿಲ್ಲೆಯಲ್ಲಿ ನೋಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣ ನೀಡಲು ಅನುದಾನ ಒದಗಿಸಲಾಗುತ್ತಿದ್ದು, ಅರ್ಹ ಮದರಸಾ ಸಂಸ್ಥೆಗಳಿAದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125, 224 ಹಾಗು ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಹೆಚ್ಚಿನ ವಿವರಗಳಿಗಾಗಿ http://dom.karnataka.gov.in ಲಿಂಕ್ ನೋಡಬಹುದು ಮತ್ತು ಸಹಾಯವಾಣಿ ಮೊ.8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಟೋಬಾ ಹೊನಕಾಂಡೆ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ