ಸೋಮವಾರ, ಆಗಸ್ಟ್ 12, 2024

ಬಳ್ಳಾರಿ ನಗರ; ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಆ.12(ಕರ್ನಾಟಕ ವಾರ್ತೆ): ನಗರ ಶಿಶು ಅಭಿವೃದ್ದಿ ಯೋಜನೆಯಡಿ ನಗರದ ವಿವಿಧ ವಾರ್ಡ್ಗಳಲ್ಲಿ ಖಾಲಿ ಇರುವ 64 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರಾಜ ಅವರು ತಿಳಿಸಿದ್ದಾರೆ. ಗೌರವಧನ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು, ಆಸಕ್ತ ಅರ್ಹ ಮಹಿಳೆಯರು ಸೆ.10 ರೊಳಗಾಗಿ https://karnemakaone.kar.nic.in/abcd/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ.08392-268609 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ