ಮಂಗಳವಾರ, ಆಗಸ್ಟ್ 27, 2024

ಕುಡತಿನಿ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಆ.27(ಕರ್ನಾಟಕ ವಾರ್ತೆ): ಕುಡತಿನಿ ಪಟ್ಟನ ಪಂಚಾಯಿತಿ ವ್ಯಾಪ್ತಿಯ 2023-24 ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನಸಡಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಸಮುದಾಯದ ಅರ್ಹ ಫಲಾನುಭವಿಗಳ ಮನೆಯ ಮೇಲ್ಚಾವಣಿ ರಿಪೇರಿ ಅಥವಾ ದುರಸ್ಥಿ ಪಡೆಸಿಕೊಳ್ಳುವುದಕ್ಕಾಗಿ ಸಹಾಯಧನ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕುಡತಿನಿ ಪಟ್ಟಣ ಪಂಚಾಯತ್‌ನ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಆಸಕ್ತ ಅರ್ಹ ಫಲಾನುಭವಿಗಳು ಸೆ.03 ರೊಳಗಾಗಿ ಅರ್ಜಿ ಸಲ್ಲಿಸಬೇಕು. *ಬೇಕಾದ ದಾಖಲೆಗಳು*: ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆ ಪುಸ್ತಕ ಹಾಗೂ ಹಾನಿಗೊಳಗಾದ ಮನೆಯ ಭಾವಚಿತ್ರದೊಂದಿಗೆ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕುಡತಿನಿ ಪಟ್ಟಣ ಪಂಚಾಯಿತಿಯ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ