ಶನಿವಾರ, ಆಗಸ್ಟ್ 31, 2024
ವಿಜಯನಗರ ಶ್ರೀಕೃಷ್ಣದೇವರಾಯ ವಿವಿ; ಸಂಭ್ರಮದ ಐದು ದಿನಗಳ ಯುವಜನೋತ್ಸವಕ್ಕೆ ತೆರೆ | ಶಿಕ್ಷಣಭ್ಯಾಸದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆ ಮುಖ್ಯ: ಕುಲಸಚಿವ ರುದ್ರೇಶ್.ಎನ್.ಎಸ್
ಬಳ್ಳಾರಿ,ಆ.31(ಕರ್ನಾಟಕ ವಾರ್ತೆ):
ಪಠ್ಯೇತರ ಚಟುವಟಿಕೆಗಳಿಗೆ ಒಳಗಾಗದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಶಿಕ್ಷಣಭ್ಯಾಸದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಕುಲಸಚಿವ ರುದ್ರೇಶ್ ಎಸ್.ಎನ್ ಅವರು ಹೇಳಿದರು.
ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಯಲು ರಂಗಮAದಿರದಲ್ಲಿ ರಾಷ್ಟಿçÃಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ಐದು ದಿನಗಳ “ರಾಜ್ಯ ಮಟ್ಟದ ಯುವಜನೋತ್ಸವ-2024”ದ ಕೊನೆಯ ದಿನ ಶನಿವಾರದಂದು ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಸೃಜನಶೀಲತೆ, ಪ್ರತಿಭೆ ಮತ್ತು ಉತ್ಸಾಹವನ್ನು ಬಿಂಬಿಸಲು ಇಂತಹ ವೇದಿಕೆಗಳು ಪ್ರಮುಖ ಪಾತ್ರವಹಿಸುತ್ತವೆ. ಪಠ್ಯಪುಸ್ತಕದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳನ್ನು ಭೌತಿಕವಾಗಿಯೂ ಮತ್ತು ಮಾನಸಿಕವಾಗಿಯೂ ಸದೃಢರನ್ನಾಗಿ ಮಾಡುತ್ತವೆ ಎಂದು ತಿಳಿಸಿದರು.
ವಿವಿಯ ರಾಷ್ಟಿçÃಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ.ಕುಮಾರ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವುದೇ ಯುವಜನೋತ್ಸವದ ಉದ್ದೇಶವಾಗಿದೆ ಎಂದರು. ಬಳಿಕ ಯುವಜನೋತ್ಸವ ಕುರಿತು ವರದಿ ವಾಚನ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥ ಡಾ.ಮೋಹನದಾಸ, ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ರಾಬರ್ಟ್ ಜೋಸ್, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಡಾ.ಶಶಿಧರ ಕೆಲ್ಲೂರ ಹಾಗೂ ವಿವಿಧ ವಿಶ್ವವಿದ್ಯಾಲಯಗಳ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳು, ರಾಷ್ಟಿçÃಯ ಸೇವಾಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಚೌಡಪ್ಪ ವಿ.ಎ., ಡಾ.ನಾಗರಾಜ್ ದಂಡೋತಿ, ಡಾ.ಭಾಗ್ಯಜ್ಯೋತಿ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಶಿಬಿರದಲ್ಲಿ ರಾಜ್ಯದ 21 ವಿಶ್ವವಿದ್ಯಾಲಯಗಳಿಂದ ಆಗಮಿಸಿರುವ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಐದು ದಿನಗಳ “ರಾಜ್ಯ ಮಟ್ಟದ ಯುವಜನೋತ್ಸವ 2024”ರ 10 ವಿವಿಧ ಸ್ಪರ್ಧೆಗಳಲ್ಲಿ ಮೊದಲನೇ ಸ್ಥಾನದಲ್ಲಿ ಸಮಗ್ರ ಪ್ರಶಸ್ತಿಯನ್ನು ಮಂಗಳೂರು ವಿಶ್ವವಿದ್ಯಾಲಯವು ಅಲಂಕರಿಸಿತು. ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಡೆದುಕೊಂಡಿತು.
ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಫಲಕಗಳನ್ನು ಹಾಗೂ ಪ್ರಮಾಣ ಪತ್ರಗಳನ್ನು ವಿವಿಯ ಕುಲಸಚಿವರು ವಿತರಿಸಿದರು.
ವಿವಿಧ ವಿಶ್ವವಿದ್ಯಾಲಯಗಳ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
*ವಿದ್ಯಾರ್ಥಿಗಳ ಅನಿಸಿಕೆ:*
‘ವಿವಿಯ ಅಧಿಕಾರಿಗಳು ಅಂತರ ಕಾಯ್ದು ಕೊಳ್ಳುತ್ತಾರೆ, ವಿಶ್ರೀಕೃವಿವಿ ಕುಲಸಚಿವರು ವಿದ್ಯಾರ್ಥಿಗಳ ಜೊತೆಗೆ ವಿದ್ಯಾರ್ಥಿಯಾಗಿ ನಮಗೆ ಸ್ಪೂರ್ತಿಯಾಗಿದ್ದಾರೆ’
- ಸುಜೇಯಕುಮಾರ ಶೆಟ್ಟಿ, ಮಂಗಳೂರು ವಿಶ್ವವಿದ್ಯಾಲಯ.
‘ಸಾಂಸ್ಕೃತಿ ಕಾರ್ಯಕ್ರಮಗಳು ಪಟ್ಟಣದ ಪ್ರದೇಶಗಳಲ್ಲಿ ಕಡಿಮೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಕಾಣಸಿಗುತ್ತವೆ.’
- ನಿತ್ಯಾ ಎಂ.ಸ್ವಾಮಿ, ದಯಾನಂದಸಾಗರ ವಿಶ್ವವಿದ್ಯಾಲಯ.
‘ಶಿಬಿರದಲ್ಲಿ ಕಲಿತಿರುವ ಮಾನವಿಯ ಮೌಲ್ಯಗಳು ಒಳ್ಳೆಯ ಅನುಭವವನ್ನು ನೀಡಿವೆ. ಮುಂಬರುವ ದಿನಗಳಲ್ಲಿ ಈ ವಿಶ್ವವಿದ್ಯಾಲಯವು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಮ್ಮರವಾಗಿ ವಿಶ್ವವಿದ್ಯಾಲಯ ಬೆಳೆಯಲಿದೆ’.
- ಅರ್ಪಿತಾ, ಬೆಂಗಳೂರು ವಿಶ್ವವಿದ್ಯಾಲಯ.
‘ವಿವಿಧ ಪ್ರದೇಶಗಳಿಂದ ಬಂದಿರುವ ವಿದ್ಯಾರ್ಥಿಗಳ ಜೊತೆ ಹೊಂದಿಕೊಳ್ಳುವುದು ಹೇಗೆ ಅಂತ ವಿಚಲಿತನಾಗಿದ್ದೆ, ವಿವಿಯ ಎಲ್ಲ ಅಧಿಕಾರಿಗಳು ಶಿಬಿರದಲ್ಲಿ ಸಹಕರಿಸಿ ಶಿಬಿರವನ್ನು ಯಶಸ್ವಿಯಾಗಿಸಿದರು.’
- ಪೂರ್ಣಚಂದ್ರ, ನಿಟ್ಟೆ ವಿಶ್ವವಿದ್ಯಾಲಯ.
---------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ