ಶುಕ್ರವಾರ, ಆಗಸ್ಟ್ 2, 2024

ಯುವಕ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಆ.2(ಕರ್ನಾಟಕ ವಾರ್ತೆ): ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಐಟಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಿದ್ಧಾರ್ಥ ಕಾಲೋನಿಯ ಹೆಚ್.ರಾಜಶೇಖರ ಎನ್ನುವ 19 ವರ್ಷದ ಜು.18 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ಯುವಕನ ಚಹರೆ ಗುರುತು: ಎತ್ತರ 5.1 ಅಡಿ, ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು. ಕನ್ನಡ, ತೆಲುಗು, ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಕಪ್ಪು ಮತ್ತು ನೀಲಿ ಬಣ್ಣದ ಚೆಕ್ಸ್ ಇರುವ ತುಂಬು ತೋಳಿನ ಗ್ರೇ ಕಲರ್ ಶರ್ಟ್ ಮತ್ತು ಕೆಂಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ, ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ:08392-258100, ಗಾಂಧಿ ನಗರ ಪೊಲೀಸ್ ಠಾಣೆ ದೂ:08392-272192, ಪಿಎಸ್‌ಐ ಮೊ:9480803082, ಪಿಐ ಮೊ:9480803046 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ