ಶುಕ್ರವಾರ, ಆಗಸ್ಟ್ 30, 2024

ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಾಚರಣೆ

ಬಳ್ಳಾರಿ,ಆ.30(ಕರ್ನಾಟಕ ವಾರ್ತೆ): ಸಂಡೂರು ತಾಲೂಕಿನ ತೋರಣಗಲ್ಲು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳ ಮೇಲೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಮಾರ್ಗದರ್ಶನದಂತೆ, ತಂಬಾಕು ನಿಯಂತ್ರಣ ಕೋಶದ ವತಿಯಿಂದ ಕಾರ್ಯಾಚರಣೆ ನಡೆಸಿ ಕೋಟ್ಪಾ ಕಾಯಿದೆ 2003ರ ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದ 20 ಅಂಗಡಿಗಳ ಮೇಲೆ ದಾಳಿ ಮಾಡಿ ದಂಡ ವಿಧಿಸಲಾಯಿತು. ಬಳಿಕ ಕೋಟ್ಪಾ ಕಾಯ್ದೆ 2003 ಹಾಗೂ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಕುರಿತು ತಂಬಾಕು ಮಾರಾಟಗಾರರಿಗೆ ಅರಿವು ಮೂಡಿಸಲಾಯಿತು. ಈ ವೇಳೆ ಹಿರಿಯ ಆರೋಗ್ಯ ನಿರೀಕ್ಷಕ ಗೋವಿಂದಪ್ಪ, ಜಿಲ್ಲಾ ತಂಬಾಕು ಸಲಹೆಗಾರರಾದ ಪ್ರಶಾಂತ್, ಆಪ್ತ ಸಮಲೋಚಕ ಯಂಕಪ್ಪ, ಪೊಲೀಸ್ ಸಿಬ್ಬಂದಿ ಫಕ್ಕೀರಪ್ಪ ಹಾಗೂ ಸಮಾಜ ಕಾರ್ಯಕರ್ತೆ ಸರಸ್ವತಿ ಹಾಜರಿದ್ದರು. ----------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ