ಶನಿವಾರ, ಆಗಸ್ಟ್ 3, 2024
ಅರ್ಜಿ ಆಹ್ವಾನ
ಬಳ್ಳಾರಿ,ಆ.03(ಕರ್ನಾಟಕ ವಾರ್ತೆ):
ಪ್ರಸ್ತಕ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿ ವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರೆತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಶುಲ್ಕ ರಹಿತ ಅರ್ಜಿಗಳನ್ನು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಕ್ಟೋಬರ್ 30 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು
ಹೆಚ್ಚಿನ ಮಾಹಿತಿಗಾಗಿ ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ