ಶನಿವಾರ, ಆಗಸ್ಟ್ 31, 2024

ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ

ಬಳ್ಳಾರಿ,ಆ.31(ಕರ್ನಾಟಕ ವಾರ್ತೆ): ನಗರದ ರೈಲ್ವೆ ನಿಲ್ದಾಣ ಫ್ಲಾಟ್ ಫಾರಂ ಸಂಖ್ಯೆ ಒಂದರಲ್ಲಿ ಶೈಲೂ ಎನ್ನುವ 06 ವರ್ಷದ ಹೆಣ್ಣು ಮಗು ಜು.19 ರಂದು ಪತ್ತೆಯಾಗಿದ್ದು, ಹೆಣ್ಣುಮಗುವಿನ ಪೋಷಕರ ಪತ್ತೆಗೆ ಸಹಕರಿಸಬೇಕೆಂದು ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮನವಿ ಮಾಡಿದ್ದಾರೆ. *ಮಗುವಿನ ಚಹರೆ ವಿವರ:* ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಈ ಮೇಲ್ಕಂಡ ಚಹರೆ ಗುರುತುಳ್ಳ ಹೆಣ್ಣು ಮಗುವಿನ ಪೋಷÀÀಕರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ರೈಲ್ವೇ ಪಿಎಸ್ ದೂ.08392-276063, ಮೊ.9480802131, ಇ-ಮೇಲ್ bellaryrly@ksp.gov.in ಅಥವಾ dcrly@ksp.gov.in ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ