ಶುಕ್ರವಾರ, ಆಗಸ್ಟ್ 9, 2024
ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಆ.09(ಕರ್ನಾಟಕ ವಾರ್ತೆ):
ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.
ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು, ಮಾಸಿಕ ತಲಾ 20,000 ರೂ. ಗಳನ್ನು ಶಿಶ್ಯವೇತನ ನೀಡಲಾಗುವುದು.
ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ, ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ.
ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ 26 ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕಾö್ಯನ್ ಮಾಡಿ ಞಚಿಡಿಟಿಚಿಣಚಿಞಚಿmeಜiಚಿಚಿಛಿಚಿಜemಥಿ@gmಚಿiಟ.ಛಿom ಗೆ ಇಮೇಲ್ ಮೂಲಕ ಕಳುಹಿಸಬಹುದು.
28 ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ