ಮಂಗಳವಾರ, ಆಗಸ್ಟ್ 20, 2024

ಕೆಎಎಸ್, ಎಫ್‌ಡಿಎ ಮತ್ತು ಎಸ್‌ಡಿಎ ಕೊಚಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಆ.20(ಕರ್ನಾಟಕ ವಾರ್ತೆ): ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್) ಅನುದಾನದಡಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ ಕೆಎಎಸ್, ಎಫ್‌ಡಿಎ ಮತ್ತು ಎಸ್‌ಡಿಎ ಹುದ್ದೆಗೆ ಆಯ್ಕೆಯಾಗಲು ಉಚಿತ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು https://ballari.nic.in ವೆಬ್‌ಸೈಟ್‌ಗೆ ನೀಡಬೇಕು. ಅರ್ಜಿ ಸಲ್ಲಿಸಲು ಆ.29 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.9964502514, 9844444958 ಗೆ ಸಂಪರ್ಕಿಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ