ಸೋಮವಾರ, ಆಗಸ್ಟ್ 19, 2024

ಕುರೆಕುಪ್ಪ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಆ.19(ಕರ್ನಾಟಕ ವಾರ್ತೆ): ಕುರೇಕುಪ್ಪ ಪುರಸಭೆ ವತಿಯಿಂದ 2023-24 ಮತ್ತು 2024-25 ನೇ ಸಾಲಿನ ಎಸ್‌ಎಫ್‌ಸಿ ಮುಕ್ತನಿಧಿ ಯೋಜನೆಯಡಿ ಪುರಸಭೆ ವ್ಯಾಪ್ತಿಯ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣಕ್ಕಾಗಿ ಕಾಯ್ದಿರಿಸಿದ ಶೇ.24.10 ರಲ್ಲಿ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರೆಕುಪ್ಪ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಸೌಲಭ್ಯ: ಕುರೇಕುಪ್ಪ ಪುರಸಭೆ ವ್ಯಾಪ್ತಿಯ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಂಬಿಬಿಎಸ್ ಮತ್ತು ಬಿಇ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಡೆಸ್ಕ್ಟಾಪ್ ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್ ಖರೀದಿಸಲು ಸಹಾಯಧನ ನೀಡಲಾಗುತ್ತದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಸೆ.5 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಪುರಸಭೆ ಕಚೇರಿಯಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕುರೆಕುಪ್ಪ ಪುರಸಭೆ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ