ಶುಕ್ರವಾರ, ಆಗಸ್ಟ್ 2, 2024

ವಸತಿ ನಿಲಯ ಕಟ್ಟಡ ಬಾಡಿಗೆಗೆ ಬೇಕಾಗಿದೆ

ಬಳ್ಳಾರಿ,ಆ.02(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು 100 ವಿದ್ಯಾರ್ಥಿ, ವಿದ್ಯಾರ್ಥಿನಿಯರ ಸಂಖ್ಯಾಬಲದೊAದಿಗೆ ಪ್ರಾರಂಭಿಸುತ್ತಿದ್ದು, ವಾಸಕ್ಕೆ ಮೂಲಭೂತ ಸೌಕರ್ಯ ಇರುವ ಸುಸಜ್ಜಿತ ಕಟ್ಟಡವಿದ್ದಲ್ಲಿ ಬಾಡಿಗೆ ನೀಡಲು ಆಸಕ್ತ ಮಾಲೀಕರು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು ಹಾಗೂ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಅಥವಾ ಮೊ.8746818180 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ