ಶುಕ್ರವಾರ, ಆಗಸ್ಟ್ 16, 2024

ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನ

ಬಳ್ಳಾರಿ,ಆ.16(ಕರ್ನಾಟಕ ವಾರ್ತೆ): ಕೃಷಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಡಿ ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕು ವ್ಯಾಪ್ತಿಯ ರೈತರಿಂದ ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಕಳೆದ ವರ್ಷ ಕೃಷಿ ಭಾಗ್ಯ ಯೋಜನೆಯು ಕೇವಲ ಮಳೆಯಾಶ್ರಿತ ಪ್ರದೇಶಕ್ಕೆ ಸೀಮಿತವಾಗಿತ್ತು. ಪ್ರಸಕ್ತ ಸಾಲಿನಲ್ಲಿ ಕೃಷಿ ಭಾಗ್ಯಯೋಜನೆಯನ್ನುಅಚ್ಚುಕಟ್ಟು ಪ್ರದೇಶಕಕ್ಕೂ ವಿಸ್ತರಿಸಲಾಗಿದೆ. ಒಣ ಭೂಮಿ ರೈತರ ಆದಾಯ ಮಳೆಯ ಮೇಲೆ ಅವಲಂಭಿತವಾಗಿರುವುದರಿAದ ನಿರೀಕ್ಷಿತ ಆದಾಯ ಸಿಗುವುದು ಕಷ್ಟ ಸಾಧ್ಯವಾಗಿದ್ದು, ರೈತರು ಕೃಷಿ ಭಾಗ್ಯ ಯೋಜನೆಯ ವಿವಿಧ ಘಟಕಗಳ ಅನುಷ್ಠಾನಗೊಳಿಸಿ ಯೋಜನೆಯ ಸದುಪಯೋಗ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ. ಕಡಿಮೆ ಮಳೆ ಬೀಳುವ ಬಹುತೇಕ ಪ್ರದೇಶಗಳಲ್ಲಿ ರೈತರು ಸುಮಾರು 500 ರಿಂದ ಸಾವಿರ ಅಡಿಯವರೆಗೆ ಕೊಳವೆ ಬಾವಿ ಕೊರೆಯಲು ಆರ್ಥಿಕವಾಗಿ ಹೆಚ್ಚು ವೆಚ್ಚ ಮಾಡುತ್ತಿದ್ದು, ಕೊಳವೆ ಬಾವಿ ವಿಫಲವಾದರೆ ಅಥವಾ ಕೆಲ ವರ್ಷಗಳ ನಂತರ ಬತ್ತಿಹೋದ ಸಂದರ್ಭದಲ್ಲಿ ರೈತರು ಕಷ್ಟದಲ್ಲಿ ಸಿಲುಕುತ್ತಿದ್ದಾರೆ. ರೈತರು ಕೊಳವೆ ಬಾವಿಯ ಬದಲಾಗಿ ಹೂಡಿಕೆಯನ್ನು ಕೃಷಿ ಭಾಗ್ಯಯೋಜನೆಯ ಘಟಕಗಳಲ್ಲಿ ಮಾಡಿ ಸುಸ್ಥಿರ ಕೃಷಿಗಾಗಿ ಬಳಸಬಹುದಾಗಿದೆ ಎಂದು ತಿಳಿಸಿದ್ದಾರೆ. ಕೃಷಿ ಹೊಂಡ ಮಾಡಿಸಿಕೊಂಡ ಎಲ್ಲಾ ಫಲಾನುಭವಿಗಳಿಗೆ ಕ್ಷೇತ್ರ ಬದು, ಡಿಸೇಲ್ ಇಂಜನ್ ಹಾಗೂ ತುಂತುರು ನೀರಾವರಿ ಘಟಕಗಳಿಗೆ ಸಹಾಯಧನ ಒದಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ