ಗುರುವಾರ, ಆಗಸ್ಟ್ 22, 2024
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ,ಆ.22(ಕರ್ನಾಟಕ ವಾರ್ತೆ):
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರು ಸೆ.14 ರೊಳಗಾಗಿ ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಇದೇ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ